ಕಡಬ : ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ -ವಿದ್ಯಾ ಸಂಸ್ಥೆ ಒಂದು ವಾರ ರಜೆ

ಕಡಬ: ಇಲ್ಲಿನ ಖಾಸಗಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗ(ಚಿಕನ್ ಪಾಕ್ಸ್) ಹರಡಿರುವುದರಿಂದ ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಭೇಟಿ ನೀಡಿದ್ದು, ಈಗಾಗಲೇ ಶಾಲೆಗೆ ರಜೆ ನೀಡಲಾಗಿದೆ.

 

ಕೆಲವು ದಿನಗಳ ಹಿಂದೆ ಕೆಲ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಈ ಸಾಂಕ್ರಾಮಿಕ ರೋಗವು ಇದೀಗ 40 ರಷ್ಟು ಹೆಚ್ಚು ವಿದ್ಯಾರ್ಥಿಗಳಿಗೆ ಹರಡಿದೆ ಎಂದು ತಿಳಿದು ಬಂದಿದೆ.

ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ನೀಡಲಾಗಿದೆ -ಲೋಕೇಶ್.ಬಿ ಶಿಕ್ಷಣಾಧಿಕಾರಿ

ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಬಿ. ಪ್ರತಿಕ್ರಿಯೆ ನೀಡಿ, ಕಡಬದ ಖಾಸಗಿ ವಿದ್ಯಾಸಂಸ್ಥೆಯ ಸುಮಾರು 40 ರಷ್ಟು ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗ(ಚಿಕನ್ ಪಾಕ್ಸ್) ತಗುಲಿದೆ. ಈ ಬಗ್ಗೆ ತಾಲೂಕು ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಇದು ಸೂಕ್ಷ್ಮ ವಿಚಾರ ಹಾಗೂ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದರಿಂದ ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಶಾಲೆಗೆ ರಜೆ ನೀಡುವಂತೆ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

Leave A Reply

Your email address will not be published.