SSLC ಪೂರಕ ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ!

ಜೂನ್ 27 ರಿಂದ ಜುಲೈ 4 ರವರೆಗೆ 10ನೇ ತರಗತಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಈ ಕುರಿತಾಗಿ ಮಹತ್ವದ ಮಾಹಿತಿಯೊಂದು ಇದೆ.

 

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ಹಿಂದಿರುಗಲು ಅವಕಾಶವಿದ್ದು, ವಿದ್ಯಾರ್ಥಿಗಳು ಬಸ್ ನಿರ್ವಾಹಕರಿಗೆ ತಮ್ಮ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಪ್ರಯಾಣ ಮಾಡಬಹುದಾಗಿದೆ.

Leave A Reply

Your email address will not be published.