ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

ಶಿವಮೊಗ್ಗ : 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಆದಾಯ ಮಿತಿ ರೂ.44,500 ಗಳು ಇರತಕ್ಕದ್ದು.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಅರ್ಜಿ ಸಲ್ಲಿಸಲು ಹಾಗೂ ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್www.bcwd.karnataka.gov.in ನ್ನು ವೀಕ್ಷಿಸಬಹುದು.

ತಾಂತ್ರಿಕ ತೊಂದರೆಗಳಾದಲ್ಲಿ  ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಸಂಖ್ಯೆ 080-65970006/08182-222129 ಗಳನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Leave a Reply

error: Content is protected !!
Scroll to Top
%d bloggers like this: