HPCL : ವಿವಿಧ 294 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 

 

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 23 ರಿಂದ ಜುಲೈ 22, 2022 ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ : 294 ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ :  ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಡಿಪ್ಲೊಮಾ, ಸಿಎ, ಐಸಿಎಐ, ಕಾನೂನು ಪದವಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

ವಯೋಮಿತಿ :ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 37 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ : ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/- ರಿಂದ 2,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:  ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು, ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗುಂಪು ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://hindustanpetroleum.com/ ವೆಬ್ಸೈಟ್ ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 23 ರಿಂದ ಜುಲೈ
22,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

Leave A Reply

Your email address will not be published.