ಬೈಕು ಹಾಗೂ ಕಾರು ನಡುವೆ ಅಪಘಾತಕ್ಕೆ ಹಸುಳೆ ಸಹಿತ ಬಾಲಕಿ ಬಲಿ!!

ಬೈಕಿನಲ್ಲಿ ಸಂಚರಿಸುತ್ತಿದ್ದ ಸಹೋದರಿಯರಿಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ಭಾಗ್ಯಶ್ರೀ(16), ತನುಶ್ರೀ (03) ಎಂದು ಗುರುತಿಸಲಾಗಿದೆ. ಇವರು ಸಂಚರಿಸುತ್ತಿದ್ದ ಸ್ಕೂಟಿ ಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರು ಸಹಿತ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Leave A Reply