‘ರಾಜ್ಯ ಸರ್ಕಾರಿ ನೌಕರ’ರಿಗೆ ಬಹುಮುಖ್ಯ ಮಾಹಿತಿ: ‘ಈ ಪರೀಕ್ಷೆ ಪಾಸ್’ ಮಾಡೋದು ಕಡ್ಡಾಯ- ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ ಈ ವರ್ಷದ ಡಿಸೆಂಬರ್ ಅಂತ್ಯದೊಳಗಾಗಿ ಪಾಸ್ ಮಾಡುವುದು ಕಡ್ಡಾಯವಾಗಿದೆ. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಮಾಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.

 

ಈ ಕುರಿತಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ 05-05-2022ರಲ್ಲಿ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ) ಪರೀಕ್ಷೆ ನಿಯಮಗಳು 2021ರ ನಿಯಮ 3(ಬಿ)ಕ್ಕೆ ಮಾಡಿರುವ ತಿದ್ದು ಪಡಿ ಅನ್ವಯ ದಿನಾಂಕ 31-12 2022ರೊಳಗೆ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ಪಾಸ್ ಮಾಡುವುದು ಕಡ್ಡಾಯವೆಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಇದಕ್ಕಾಗಿ ಹೆಚ್ಚುವರಿ ಅನುದಾನ ಕೂಡ ಕಿಯೋನಿಕ್ಸ್ ಕೋರಬಾರದು. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ 01-04-2022 ರಿಂದ 31-12-2022ರೊಳಗೆ ಮಾತ್ರ ವಿಸ್ತರಿಸಲು ಸರ್ಕಾರ ಆದೇಶಿಸಿದೆ ಎಂದಿದ್ದಾರೆ.

Leave A Reply

Your email address will not be published.