IDBI ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ| ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ನಲ್ಲಿಅವಶ್ಯವಿರುವ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಹುದ್ದೆ : 226 ವ್ಯವಸ್ಥಾಪಕ, ಸಹಾಯಕ ಸಾಮಾನ್ಯ ವ್ಯವಸ್ಥಾಪಕ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಇರುವ ಶಾಖೆಗಳಲ್ಲಿ ನೇಮಕಾತಿ ನಡೆಯುತ್ತಿದ್ದು, ಒಟ್ಟು 226 ಹುದ್ದೆಗಳಿಗೆ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಮುಖ ದಿನಾಂಕ : ಆಸಕ್ತರು ಆನ್‌ಲೈನ್ ಮೂಲಕ ಜೂನ್ 25 ರಿಂದ ಜುಲೈ 10,2022ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ವಿದ್ಯಾರ್ಹತೆ : ಈ ಹುದ್ದೆಗಳಿಗೆ ಬಿ.ಎಸ್ಸಿ, ಬಿ.ಇ/ಬಿ.ಟೆಕ್, ಕಾನೂನು ಪದವಿ, ಎಂಸಿಎ, ಎಂಎಸ್ಸಿ ಮತ್ತು ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,170/ ರಿಂದ 89,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1000/-ರೂ ಮತ್ತು ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜುಲೈ 10,2022 ಕೊನೆಯ ದಿನವಾಗಿರುತ್ತದೆ.
ಆಯ್ಕೆ ವಿಧಾನ : ಐಡಿಬಿಐ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ, ಸಹಾಯಕ ಸಾಮಾನ್ಯ ವ್ಯವಸ್ಥಾಪಕ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್-ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಕೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://idbibank.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಜೂನ್ 25 ರಿಂದ ಜುಲೈ 10,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ