ಪದವಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ!

ಬೆಂಗಳೂರು : ಪದವಿ ಪ್ರವೇಶ ಶುಲ್ಕ ಹೆಚ್ಚಳವಾಗಲಿದೆ ಎಂದು ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿಗೆ ಪದವಿ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ತಿಳಿಸಿದೆ.

 

ಕಾಲೇಜು ಶಿಕ್ಷಣ ಇಲಾಖೆಯು 2022-23 ನೇ ಸಾಲಿನ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ಶುಲ್ಕ ನಿಗದಿ ಮಾಡಿದೆ. 2021-22 ನೇ ಸಾಲಿನ ಶುಲ್ಕವನ್ನೇ 2022-23 ನೇ ಸಾಲಿಗೂ ಮುಂದುವರೆಸುವಂತೆ ಸೂಚನೆ ನೀಡಿದೆ.

ಅರ್ಜಿ ಶುಲ್ಕ, ಪ್ರವೇಶ ಶುಲ್ಕ ಹಾಗೂ ವಿವಿಧ ಶುಲ್ಕಗಳನ್ನು ಸೇರಿಸಿ ಒಟ್ಟು 800 ರೂ. ನಿಗದಿಪಡಿಸಲಾಗಿದೆ. ಜೊತೆಗೆ ನೋಂದಣಿ, ಪರೀಕ್ಷಾ, ಕ್ರೀಡಾ ಅಭಿವೃದ್ಧಿ, ಸಾಂಸ್ಕೃತಿಕ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕಾಲೇಜಿನ ಸಮಿತಿಯೇ ನಿರ್ಣಿಯಿಸಬೇಕು ಎಂದು ಇಲಾಖೆ ತಿಳಿಸಿದೆ.

Leave A Reply

Your email address will not be published.