ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ಇಲ್ಲಿದೆ ದ್ವಿಪದವಿಯ ವಿವರ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ಯುವಕರನ್ನು ಉನ್ನತ ಶಿಕ್ಷಣದತ್ತ ಸೆಳೆಯಲು ಮುಂದಾಗಿದ್ದು, ದ್ವಿಪದವಿಗೆ ಅವಕಾಶ ನೀಡಿದೆ. ಯುಜಿಸಿ ನಿಯಮಾವಳಿ ಅನ್ವಯ ಇದೇ ಮೊದಲ ಬಾರಿಗೆ ಏಕಕಾಲಕ್ಕೆ ಎರಡು ಪದವಿ ಪಡೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಮುಕ್ತ ವಿವಿಯಲ್ಲಿ ವಿದ್ಯಾರ್ಥಿಗಳು ಯಾವುದೇ ಪದವಿ ಅಧ್ಯಯನ ಮಾಡುವ ಜೊತೆಗೆ ಮತ್ತೊಂದು ಪಡೆಯುವುದು ಪಡೆಯಲು ಅನುಕೂಲ ಮಾಡಿಕೊಟ್ಟಿದೆ ಎಂದು ತಿಳಿಸಿದ್ದಾರೆ.

ಬಿಎ, ಬಿಕಾಂ, ಬಿಎಸ್ಸಿ ಪದವಿಯನ್ನು ಪ್ರತ್ಯೇಕವಾಗಿ ವ್ಯಾಸಂಗ ಮಾಡುತ್ತಿರುವವರು ಇದರೊಂದಿಗೆ ಮತ್ತೊಂದು ಪದವಿಯನ್ನು ಕೂಡ ಅಧ್ಯಯನ ಮಾಡಬಹುದು. ಅಲ್ಲದೇ, ಯಾವುದೇ ಸ್ನಾತಕೋತ್ತರ ಪದವಿ ಪಡೆಯುತ್ತಿರುವವರು ಮತ್ತೊಂದು ಸ್ನಾತಕೋತ್ತರ ಪದವಿಯನ್ನು ಕೂಡ ಪಡೆಯಬಹುದಾಗಿದೆ.

Leave A Reply

Your email address will not be published.