“ಪೊಲೀಸ್ ಕಾನ್ ಸ್ಟೇಬಲ್” ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ!!!

ಪೊಲೀಸ್ ಕಾನ್‌ಸ್ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ.

 

ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಠಾಣಾ ವ್ಯಾಪ್ತಿಯಲ್ಲಿ ಕಾನ್ ಸ್ಟೇಬಲ್ ಗಳಿಗೆ ಈ ನೂತನ ಆದೇಶ ಅನ್ವಯವಾಗಲಿದೆ. ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಕಾನ್‌ಸ್ಟೇಬಲ್ ಗಳನ್ನು ಮುಂದಿನ ದಿನಗಳಲ್ಲಿ ವರ್ಗಾವಣೆಯಾಗಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave A Reply

Your email address will not be published.