ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2022-23ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಿಇಟಿ/ನೀಟ್ ವೃತ್ತಿಪರ ಕೋರ್ಸ್ ಳಲ್ಲಿ ಅಂದರೆ MBBS, BDS, BE, B.Tech, B Ayush, B Arch ಇಂತಹ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲದ ಯೋಜನೆಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತರ ಸಮುದಾಯದವರಾದ ಕ್ರೈಸ್ತರು, ಮುಸಲ್ಮಾನರು, ಆಂಗ್ಲೋ-ಇಂಡಿಯನ್ಸ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಆನ್‌ಲೈನ್‌ನಲ್ಲಿ ಅರ್ಜಿಯನ್ನು ವೆಬ್‌ಸೈಟ್ https://kmdconline.karnataka.gov.in ಮೂಲಕ 2022ರ ಜುಲೈ 20 ರೊಳಗಾಗಿ ಸಲ್ಲಿಸುವುದು.

ಯೋಜನೆಯ ವಿವರ, ಸಾಲ ಸೌಲಭ್ಯ ಪಡೆಯಲು ಹೊಂದಿರಬೇಕಾದ ಸಾಮಾನ್ಯ ಅರ್ಹತೆಗಳ ವಿವರಗಳನ್ನು https://kmdconline.karnataka.gov.in ಇಲ್ಲಿ ಪಡೆಯಬಹುದು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿ ಮತ್ತು ಅಗತ್ಯ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ನಂ.1599, ವೈ.ಎನ್. ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ದೂರವಾಣಿ ಸಂಖ್ಯೆ: 080-27681786, ಮೇಲ್ ಐಡಿ: kmdcbrural@gmail.com  ಹಾಗೂ 24×7 ಸಹಾಯವಾಣಿ ಸಂಖ್ಯೆ: 8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.