ಉಡುಪಿ:ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ!! ಹಿಂಬದಿ ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಸಾವು

Share the Article

ಉಡುಪಿ:ಬೈಕ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸಹಸವಾರ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಸಮೀಪ ನಡೆದಿದೆ.

ಮೃತನನ್ನು ಐಟಿಐ ವಿದ್ಯಾರ್ಥಿ ಗಂಗನಾಡು ನಿವಾಸಿ ಸೃಜನ್ ನಾಗರಾಜ ಮರಾಠಿ (19)ಎಂದು ಗುರುತಿಸಲಾಗಿದ್ದು, ಬೈಕ್ ಚಲಾಯಿಸುತ್ತಿದ್ದ ಸವಾರ ದಿವಾಕರ್ ನಾಯ್ಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೃತ ವಿದ್ಯಾರ್ಥಿ ಸೃಜನ್ ಹೊಸಂಗಡಿಯ ತನ್ನ ಅಜ್ಜಿ ಮನೆಗೆ ಕಾರ್ಯಕ್ರಮ ನಿಮಿತ್ತ ಬಂದು ತನ್ನ ಸಂಬಂಧಿ ದಿವಾಕರ್ ಜೊತೆ ಬೈಕಿನಲ್ಲಿ ವಾಪಸ್ಸು ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply