ಮಹಿಳೆಯರೇ ನಿಮಗೊಂದು ಸಿಹಿ ಸುದ್ದಿ, ಬಡ್ಡಿರಹಿತ ಸಾಲಸೌಲಭ್ಯ!

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ, ಕಿರುಸಾಲ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಅರ್ಹ ಮಹಿಳೆಯರು ಮತ್ತು ಸ್ತ್ರೀಶಕ್ತಿ ಗುಂಪುಗಳಿಗೆ ಬ್ಯಾಂಕ್ ಸಾಲ ಹಾಗೂ ನಿಗಮದ ಸಹಾಯಧನದೊಂದಿಗೆ ಸೌಲಭ್ಯ ನೀಡಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

 

2022-23 ನೇ ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ, ಹಾಗೂ ಕೃಷಿಯೇತರ ಚಟುವಟಿಕೆಗಳ (ಹಂದಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ, ಮತ್ತಿತರ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 55 ವರ್ಷ ವಯೋಮಿತಿಗೆ ಒಳಪಟ್ಟು ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶವಿದೆ.

18 ರಿಂದ 55 ವರ್ಷದೊಳಗಿನ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ/ ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ರೂ.1 ಲಕ್ಷದಿಂದ ರೂ.3 ಲಕ್ಷ ಹಾಗೂ ಶೇ.50 ಸಹಾಯಧನ ನೀಡಲಾಗುವುದು ಮತ್ತು ಕುಟುಂಬದ ವಾರ್ಷಿಕ ಆದಾಯ ರೂ.2 ಲಕ್ಷ ಮೀರಬಾರದು. ಜಾತಿ ಪ್ರಮಾಣ ಪತ್ರ, ಆದಾಯ ದೃಡೀಕರಣ ಪತ್ರ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಪೋಟೋ.

ಕಿರುಸಾಲ ಯೋಜನೆಯಡಿ ಸ್ತ್ರೀಶಕ್ತಿ ಸ್ವ-ಸಹಾಯ ಗುಂಪಿನ (ಇತರೆ ವರ್ಗ) ಸದಸ್ಯರುಗಳಿಗೆ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರತಿ ಗುಂಪಿಗೆ ರೂ. 2 ಲಕ್ಷಗಳನ್ನು ಬಡ್ಡಿ ರಹಿತ ಸಾಲವನ್ನಾಗಿ ನೀಡಲಾಗುವುದು.

ಕಿರುಸಾಲ ಪಡೆಯುವ ಸ್ತ್ರೀಶಕ್ತಿ ಗುಂಪಿಗೆ ಇರುವ ಅರ್ಹತೆಗಳು:-ಬ್ಯಾಂಕ್ ಖಾತೆ ಹೊಂದಿದ್ದು ಚಾಲ್ತಿಯಲ್ಲಿರಬೇಕು. ಬ್ಯಾಂಕಿನಲ್ಲಿ ಯಾವುದೇ ಸಾಲ ಹೊಂದಿಲ್ಲವೆಂದು ನಿರಾಕ್ಷೇಪಣಾ ದೃಢೀಕರಣ ಪತ್ರ ನೀಡಬೇಕು. ಗುಂಪು ಅರ್ಥಿಕವಾಗಿ ಸದೃಢವಾಗಿದ್ದು, ಗುಂಪಿನ ಉಳಿತಾಯ ಗರಿಷ್ಟ 2 ಲಕ್ಷಗಳಿಗೆ ಮೇಲ್ಪಟ್ಟಿರಬೇಕು. ಗುಂಪು ಒಂದು ಯೋಜನಾ ಘಟಕವನ್ನು ಸ್ಥಾಪಿಸಲು ಯೋಜನಾ ವರದಿಯನ್ನು ಹೊಂದಿರಬೇಕು. ತಾಲೂಕು ಮಟ್ಟದ ಸ್ತ್ರೀಶಕ್ತಿ ಒಕ್ಕೂಟದಲ್ಲಿ ನೋಂದಾವಣೆಯಾಗಿದ್ದು ರೂ.250 ಶುಲ್ಕ ಪಾವತಿಸಿ ಸದಸ್ಯತ್ವ ಹೊಂದಿರಬೇಕು. ಸದಸ್ಯರೆಲ್ಲರೂ ರೂ.50 ಛಾಪಾ ಕಾಗದದಲ್ಲಿ ಕರಾರು ಪತ್ರ, ಸ್ತ್ರೀಶಕ್ತಿ ಗುಂಪು ಗ್ರೇಡೀಂಗ್‌ಗೆ ಒಳಪಟ್ಟಿರಬೇಕು.

ಚೇತನಾ ಯೋಜನೆ: 2022-23 ನೇ ಸಾಲಿನಲ್ಲಿ ಚೇತನಾ ಯೋಜನೆಯಡಿ ಲೈಂಗಿಕ ವೃತ್ತಿ ನಿರತ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ ಹಾಗೂ ಸಮಾಜದಲ್ಲಿ ಗೌರವಾನ್ವಿತ ಜೀವನವನ್ನು ನಡೆಸಿ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ನಿಗಮವು ಪ್ರತಿ ಫಲಾನುಭವಿಗೆ ರೂ.30 ಸಾವಿರ ಪ್ರೋತ್ಸಾಹಧನವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಆರ್.ಟಿ.ಜಿ.ಎಸ್

ಚೇತನಾ ಯೋಜನೆ: 2022-23 ನೇ ಸಾಲಿನಲ್ಲಿ ಚೇತನಾ ಯೋಜನೆಯಡಿ ಲೈಂಗಿಕ ವೃತ್ತಿ ನಿರತ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ ಹಾಗೂ ಸಮಾಜದಲ್ಲಿ ಗೌರವಾನ್ವಿತ ಜೀವನವನ್ನು ನಡೆಸಿ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ನಿಗಮವು ಪ್ರತಿ ಫಲಾನುಭವಿಗೆ ರೂ.30 ಸಾವಿರ ಪ್ರೋತ್ಸಾಹಧನವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಆರ್.ಟಿ.ಜಿ.ಎಸ್ ಮೂಲಕ ಜಮೆ ಮಾಡಲಾಗುವುದು. ಫಲಾನುಭವಿಯು ಸಂಬಂಧಪಟ್ಟ ಚುನಾವಣಾ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ವ್ಯಾಪಾರ ಮಾಡುತ್ತಿರುವ ಪೋಟೋ 2, ಬ್ಯಾಂಕ್‌ನಲ್ಲಿ ಯಾವುದೇ ಸಾಲವನ್ನು ಹೊಂದಿಲ್ಲವೆಂದು ನಿರಾಕ್ಷೇಪಣ ದೃಢೀಕರಣ ಪತ್ರ(ಎನ್‌ಒಸಿ) ದಾಖಲೆಗಳೊಂದಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ಧನಶ್ರೀ ಯೋಜನೆ: 2022-23 ನೇ ಸಾಲಿನಲ್ಲಿ ಧನಶ್ರೀ ಯೋಜನೆಯಡಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 18-60 ವಯೋಮಿತಿಯ ಹೆಚ್.ಐ.ವಿ. ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಂಡು ಅಭಿವೃದ್ಧಿ ಹೊಂದಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರತಿ ಫಲಾನುಭವಿಗೆ ರೂ.30 ಸಾವಿರಗಳ ಪ್ರೋತ್ಸಾಹಧನವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಆಕ್ಟಿಜಿಎಸ್ ಮೂಲಕ ಜಮೆ ಮಾಡಲಾಗುವುದು. ಫಲಾನುಭವಿಯು ಸಂಬಂಧಪಟ್ಟ ಚುನಾವಣಾ ಗುರುತಿನ ಚೀಟಿ ಮತ್ತು
ಆಧಾರ್ ಕಾರ್ಡ್, ಅರ್ಜಿದಾರರು ಹೆಚ್.ಐ.ವಿ ಸೋಂಕಿತರೆಂದು ಆರೋಗ್ಯ ಕೇಂದ್ರದಲ್ಲಿ ಮತ್ತು ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಪಡೆದ ವೈದ್ಯಕೀಯ ದೃಢೀಕರಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ವ್ಯಾಪಾರ ಮಾಡುತ್ತಿರುವ ಪೋಟೋ, ಬ್ಯಾಂಕ್‌ನಲ್ಲಿ ಯಾವುದೇ ಸಾಲವನ್ನು ಹೊಂದಿಲ್ಲವೆಂದು ನಿರಾಕ್ಷೇಪಣ ದೃಢೀಕರಣ ಪತ್ರ(ಎನ್‌ಒಸಿ) ದಾಖಲೆಗಳೊಂದಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ: 2022-23 ನೇ ಸಾಲಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಸ್ವ ಉದ್ಯೋಗ ಕೈಗೊಂಡು ಗೌರವಾನ್ವಿತ ಜೀವನವನ್ನು ನಡೆಸಲು ಹಾಗೂ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ನಿಗಮವು ರೂ.30 ಸಾವಿರ ಪ್ರೋತ್ಸಾಹಧನವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಆರ್ಟಿಜಿಎಸ್ ಮೂಲಕ ಜಮೆ ಮಾಡಲಾಗುವುದು. ಫಲಾನುಭವಿಯು ಸಂಬಂಧಪಟ್ಟ ಚುನಾವಣಾ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ, 2 ಪಾಸ್ ಪೋರ್ಟ ಸೈಜ್ ಪೋಟೋ ಮತ್ತು ವ್ಯಾಪಾರ ಮಾಡುತ್ತಿರುವ ಪೋಟೋ, ಬ್ಯಾಂಕ್‌ನಲ್ಲಿ ಯಾವುದೇ ಸಾಲವನ್ನು ಹೊಂದಿಲ್ಲವೆಂದು ನಿರಾಕ್ಷೇಪಣ ದೃಢೀಕರಣ ಪತ್ರ(ಎನ್‌ಒಸಿ) ದಾಖಲೆಗಳೊಂದಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ಧನಶ್ರೀ, ಚೇತನಾ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯ ಅರ್ಜಿಗಳು ನಗರದ ಜಿಲ್ಲಾ ಕಚೇರಿಯಲ್ಲಿ ಲಭ್ಯವಿದ್ದು ಅರ್ಹರು ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಜುಲೈ, 30 ರೊಳಗೆ ಸಲ್ಲಿಸಬಹುದು.

ಅದರಂತೆ ಉದ್ಯೋಗಿನಿ ಯೋಜನೆ ಮತ್ತು ಕಿರುಸಾಲ ಯೋಜನೆಯ ಅರ್ಜಿಗಳು ಜಿಲ್ಲೆಯ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿದ್ದು, ಅರ್ಹ ಮಹಿಳೆಯರು ಈ ಕಚೇರಿಗಳಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು.

ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ ಮಹಿಳೆಯರು ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ ಮಡಿಕೇರಿ ದೂ.ಸಂ.08272-295087.
ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಸ್ತ್ರೀಶಕ್ತಿ ಭವನ, ತಾಲೂಕು ಪಂಚಾಯತ್ ಆವರಣ ಸೋಮವಾರಪೇಟೆ ದೂರವಾಣಿ ಸಂಖ್ಯೆ.08276-200023/9900765821.

ವಿರಾಜಪೇಟೆ ತಾಲೂಕು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಆವರಣದ, ತೋಟಗಾರಿಕೆ ಇಲಾಖೆ ಹಿಂಭಾಗ, ಪೊನ್ನಂಪೇಟೆ-571216 ದೂರವಾಣಿ ಸಂಖ್ಯೆ 08274-201878.

ಜಿಲ್ಲಾ ವ್ಯವಸ್ಥಾಪಕರ ಕಚೇರಿ/ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ ದೂ.ಸಂ.9980632352

ಇರುವ ಮಹಿಳೆಯರು ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ .08272-295087.

ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಸ್ತ್ರೀಶಕ್ತಿ ಭವನ, ತಾಲೂಕು ಪಂಚಾಯತ್ ಆವರಣ ಸೋಮವಾರಪೇಟೆ .0.08276-200023/9900765821.

ವಿರಾಜಪೇಟೆ ತಾಲೂಕು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಆವರಣದ, ತೋಟಗಾರಿಕೆ ಇಲಾಖೆ ಹಿಂಭಾಗ, ಪೊನ್ನಂಪೇಟೆ-571216 ದೂರವಾಣಿ ಸಂಖ್ಯೆ 08274-201878.

ಜಿಲ್ಲಾ ವ್ಯವಸ್ಥಾಪಕರ ಕಚೇರಿ/ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ ದೂ.ಸಂ.9980632352

ಕಚೇರಿ/ದೂರವಾಣಿ ಸಂಖ್ಯೆಯನ್ನು ಕಚೇರಿ ವೇಳೆಯಲ್ಲಿ
ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ
ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎನ್.ಮಂಜುನಾಥ್ ತಿಳಿಸಿದ್ದಾರೆ.

Leave A Reply

Your email address will not be published.