ಟೀಮ್ ಇಂಡಿಯಾ ನಾಯಕನಿಗೆ ಕೊರೊನಾ ಸೋಂಕು!
ಇಂಗ್ಲೆಂಡ್ ನ ಲೀಸೆಸ್ಟನ್ ನಲ್ಲಿ ನಡೆದ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಶನಿವಾರ ನಡೆಸಿದ ರ್ಯಾಪಿಡ್ ಆಂಟಿಜೆನ್ ಟೆಸ್ಟ್ (ಆರ್ಎಟಿ) ನಂತರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಪ್ರಸ್ತುತ ತಂಡದ ಹೋಟೆಲ್ನಲ್ಲಿ ಪ್ರತ್ಯೇಕವಾಗಿದ್ದಾರೆ ಮತ್ತು ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ’ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮರುನಿಗದಿಪಡಿಸಲಾದ ಐದನೇ ಟೆಸ್ಟ್ ಪಂದ್ಯದ ಮೊದಲು ಶರ್ಮಾ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಇದೀಗ ರಿಪೋರ್ಟ್ ಪಾಸಿಟಿವ್ ಬಂದಿದೆ. ಜುಲೈ 1 ರಂದು ಈ ಪಂದ್ಯ ಪ್ರಾರಂಭವಾಗಲಿದೆ.