ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್ !!

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ವಾರಣಾಸಿಯಲ್ಲಿ ಪಕ್ಷಿಗಳ ಬಡಿತದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ.

 

ಸಿಎಂ ಯೋಗಿ ಆದಿತ್ಯನಾಥ್ ಅವರು ಲಖನೌಗೆ ತೆರಳುತ್ತಿದ್ದರು. ಘಟನೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಸರ್ಕ್ಯೂಟ್ ಹೌಸ್‍ಗೆ ತೆರಳಿದ್ದಾರೆ. ಘಟನೆಯಲ್ಲಿ ಯಾವುದೇ ಅಪಾಯವಾಗದೇ ಯೋಗಿ ಆದಿತ್ಯನಾಥ್ ಅವರು ಸುರಕ್ಷಿತರಾಗಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ವಿಮಾನದಲ್ಲಿ ಲಕ್ನೋಗೆ ಪ್ರಯಾಣ ಮುಂದುವರಿಸಲಿದ್ದಾರೆ. ಅವರ ಪ್ರಯಾಣಕ್ಕೆ ಆಡಳಿತ ಸಕಲ ವ್ಯವಸ್ಥೆ ಮಾಡಿದೆ. ಯೋಗಿ ಆದಿತ್ಯನಾಥ್ ಅವರು ಶನಿವಾರ ವಾರಣಾಸಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳು ಮತ್ತು ಕಾನೂನು ಸುವ್ಯವಸ್ಥೆ ಪರಿಶೀಲಿಸಿದ್ದರು. ವಾರಣಾಸಿಯಲ್ಲಿ ರಾತ್ರಿ ತಂಗಿದ್ದ ಅವರು ಭಾನುವಾರ ಬೆಳಗ್ಗೆ ಲಖನೌಗೆ ತೆರಳುತ್ತಿದ್ದರು. ಆಗ‌ ಈ ಘಟನೆ ನಡೆದಿದೆ.

Leave A Reply

Your email address will not be published.