ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಆಲಿಯಾ

ಬಾಲಿವುಡ್ ಖ್ಯಾತ ನಟಿ ಆಲಿಯಾ ಭಟ್ ತಾಯಿಯಾಗುತ್ತಿರುವ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಮದುವೆಯಾಗಿ 2 ತಿಂಗಳ ಬಳಿಕ ಆಲಿಯಾ ಭಟ್ ಗುಡ್ ನ್ಯೂಸ್ ನೀಡಿದ್ದಾರೆ.

ಏಪ್ರಿಲ್ 14ರಂದು ಖ್ಯಾತ ನಟ ರಣಬೀರ್ ಜೊತೆ ಹಸೆಮಣೆ ಏರಿದ್ದ ನಟಿ ಆಲಿಯಾ ಭಟ್ ಗರ್ಭಿಣಿ ಆಗಿರುವ ಸಿಹಿ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಆಲಿಯಾ ಭಟ್ ಮತ್ತು ರಣಬೀರ್ ಜೋಡಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ.

https://www.instagram.com/p/CfS-_HvMhQ8/?utm_source=ig_web_copy_link

Leave A Reply

Your email address will not be published.