ವಿಟ್ಲ : ಮಹಿಳೆಯ ಮೇಲೆ ಚೂರಿ ಇರಿದ ಯುವಕ!

ವಿಟ್ಲ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು
ಪರಾರಿಯಾದ ಘಟನೆ ವಿಟ್ಲದ ಅನಂತಾಡಿಯ ಜನಪ್ರಿಯ ಗಾಡರ್ನ್ ಬಳಿ ನಡೆದಿದೆ.

ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆಯ ಮೇಲೆ ಹಲ್ಲೆ ಮಾಡಲಾಗಿದೆ.

ಆಸ್ತಿ ವಿಚಾರಕ್ಕೆ ಸಂಬಂಧಿಸಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಲ್ಲೆಗೈದ ಯುವಕ ಪೆರಾಜೆ ಕಡೆ ಓಡಿ ಹೋಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗಲೇ ಸಾವನ್ನಪ್ಪಿದ್ದಾರೆ. ಶಕುಂತಲಾ ಅವರಿಗೆ ಇಬ್ಬರು ಮಕ್ಕಳಿದ್ದು, ಗಂಡ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave A Reply

Your email address will not be published.