India post recruitment 2022 | SSLC ಪಾಸಾದವರಿಗೆ ಉದ್ಯೋಗ, ಅರ್ಜಿ ಸಲ್ಲಿಸಲು ಕೊನೆ ದಿನ-ಜುಲೈ 20

ಭಾರತೀಯ ಅಂಚೆ ಇಲಾಖೆಯು ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 

ಖಾಲಿ ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 24

ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಂದರೆ ಎಸ್​ಎಸ್​ಎಲ್​ಸಿ ಪಾಸಾದ, ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಅಂಚೆ ಇಲಾಖೆಯ ಡ್ರೈವರ್​ ಹುದ್ದೆಗಳಿಗೆ 56 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2022 ರಂದು ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹಾಗೆಯೇ ಅರ್ಜಿಯನ್ನು ಡೌನ್​ಲೋಡ್ ಮಾಡಿ ಭರ್ತಿ ಮಾಡುವ ಮೂಲಕ ಅಂಚೆ ಮೂಲಕ ಕಳುಹಿಸಿಕೊಡಬಹುದು. ಅಂಚೆಯ ಮೂಲಕ ಅರ್ಜಿ ಕಳಿಸಬೇಕಾದ ವಿಳಾಸ ಈ ಕೆಳಗಿನಂತಿದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:
The Senior Manager (JAG), Mail Motor Service, No. 37, Greams Road, Chennai- 600006.

Leave A Reply

Your email address will not be published.