ರಾಜ್ಯ ಸರ್ಕಾರದಿಂದ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ “ಅರಿವು” ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಭೌದ್ಧರು, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಸಿ.ಇ.ಟಿ-ನೀಟ್  ಪರೀಕ್ಷೆ ಬರೆದು ವಿವಿಧ ವೃತ್ತಿಪರ ಕೋರ್ಸ್‍ಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೂ ಆಯುಶ್ ಪದವಿ ಕೋರ್ಸಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲ ಪಡೆಯಬಹುದು.

ಆಸಕ್ತ ಅಭ್ಯರ್ಥಿಗಳು ನಿಗಮದ ವೆಬ್‍ಸೈಟ್ kmdconline.karnataka.gov.in ಮೂಲಕ ಜುಲೈ 20 ರೊಳಗೆ ಅರ್ಜಿ ಸಲ್ಲಿಸಿ ಜಿಲ್ಲಾ ಕಛೇರಿಗೆ ಜುಲೈ 25ರೊಳಗೆ ಭೌತಿಕ ಪ್ರತಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮೇಲ್ಕಂಡ ಅಂತರ್ಜಾಲ ಮತ್ತು ಜಿಲ್ಲಾ ಕಛೇರಿಯನ್ನು ಸಂಪರ್ಕಿಸಲು ಕೋರಿದೆ.

Leave A Reply

Your email address will not be published.