ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ

Share the Article

ಬೆಂಗಳೂರು: ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2021-22ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವ್ಯಾಂಸಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗಸ್ಟ್, ಸೆಪ್ಟೆಂಬರ್, ನವೆಂಬರ್ ವರೆಗೂ ತರಗತಿಗಳು ಹಾಗೂ ಪರೀಕ್ಷೆಗಳು ನಡೆಯೋದರಿಂದ , ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಕೋರಲಾಗಿದೆ.

ಈ ಕೋರಿಕೆಯ ಹಿನ್ನಲೆಯಲ್ಲಿ, ಎಲ್ಲಾ ವರ್ಗದ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆ, ತರಗತಿಗಳು ನಡೆಯುತ್ತಿದ್ದಲ್ಲಿ, ಅದನ್ನು ಖಚಿತಪಡಿಸಿಕೊಂಡು, ಒಂದು, ಎರಡು ತಿಂಗಳ ಅವಧಿಗೆ ಅಂದರೇ ಜುಲೈ,  ಆಗಸ್ಟ್ –2022ಕ್ಕೆ ನಿಗದಿತ ಮೊತ್ತವನ್ನು ಪಾವತಿಸಿಕೊಂಡು, ರಸೀದಿ ನೀಡುವುದು ಎಂದು ತಿಳಿಸಿದೆ. ವಿದ್ಯಾರ್ಥಿಗಳು ಹೀಗೆ ಪಡೆದಂತ ರಸೀದಿ ಹಾಗೂ ಹಳೆಯ ಪಾಸ್ ಎರಡನ್ನು ತೋರಿಸಿ, ಪ್ರಯಾಣಿಸಬಹುದು. ಈ ಬಗ್ಗೆ ಎಲ್ಲಾ ಚಾಲಕ, ನಿರ್ವಾಹಕ, ತನಿಖಾ ಸಿಬ್ಬಂದಿಗಳು ಕ್ರಮವಹಿಸುವಂತೆ ಸೂಚಿಸಿದ್ದಾರೆ.

Leave A Reply

Your email address will not be published.