ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ | ಯಶಸ್ವಿನಿ ಯೋಜನೆ ಮರು ಜಾರಿ
ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ ಮಾಡುವ ಚಿಂತನೆ ನಡೆಸಿದೆ.
ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ ಸದಸ್ಯರು ಮತ್ತು ಅವರ ಕುಟುಂಬವನ್ನು ಒಳಗೊಂಡ ರಾಜ್ಯದ 1.5 ಕೋಟಿ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.
ಯಶಸ್ವಿನಿ ಯೋಜನೆ ಮೂಲಕ ವೈದ್ಯಕೀಯ ಕ್ಷೇತ್ರದ 14
ವಿಭಾಗಗಳಲ್ಲಿ ಗುರುತಿಸಿದ 295 ಕಾಯಿಲೆಗಳಿಗೆ 823
ಶಸ್ತ್ರಚಿಕಿತ್ಸೆಗೆ ನಗದು ರಹಿತ ಸೌಲಭ್ಯ ಪಡೆಯಬಹುದು. ಈ ಮೊದಲಿದ್ದ 905 ಯಶಸ್ವಿನಿ ವರ್ಕ್ ಆಸ್ಪತ್ರೆಗಳನ್ನು 1800 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು ಗ್ರಾಮೀಣ ಯಶಸ್ವಿನಿ ಯೋಜನೆಯಡಿಯಲ್ಲಿ 1 ಬಾರಿ ಚಿಕಿತ್ಸೆಗೆ ಒಳಗಾದರೆ 1.25 ಲಕ್ಷ ರೂ. ಮಿತಿ ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆಗೆ ಒಳಗಾದರೆ 2 ಲಕ್ಷ ರೂ.ವರೆಗೆ ನಗದು ರಹಿತ ಶಸ್ತ್ರ ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ರಾಜ್ಯದಲ್ಲಿ ಅಕ್ಟೋಬರ್ ನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ. ರಾಜ್ಯದಲ್ಲಿ 6 ಸಾವಿರ ಕೋಟಿಗೂ ಅಧಿಕ ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾ ಬಾಕಿ ಇದ್ದು, ಈ ವಿಚಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.