ರಾಜ್ಯಾದ್ಯಂತ ಭಾರೀ ಮಳೆ, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ !!!
ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಜೂ.28 ಮತ್ತು ಜೂ.29ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ನೀಡಲಾಗಿದೆ.
ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರಾಜ್ಯದ ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಾಗಿರುವ, ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿನಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಜೂ.30 ಮತ್ತು ಜು.1ರಂದು ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಿಹಾರದಲ್ಲಿ ಗುಡುಗು ಸಹಿತ ಮಿಂಚು ಮತ್ತು ಬಿರುಗಾಳಿ ಸಹಿತ ಹಲವು ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
ಹಲವಾರು ಉತ್ತರ ಮತ್ತು ಪೂರ್ವ ರಾಜ್ಯಗಳು ಉತ್ತರಾಖಂಡ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢ, ಬಿಹಾರ, ಪಶ್ಚಿಮ ಬಂಗಾಳ (ಉಪ-ಹಿಮಾಲಯ), ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗುಜರಾತ್, ಮಹಾರಾಷ್ಟ್ರ (ಮಧ್ಯ), ಕರ್ನಾಟಕ (ಕರಾವಳಿ), ಕೇರಳ – ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ ಬೀಳುವ ನಿರೀಕ್ಷೆಯಿದೆ.
ಭಾರತೀಯ ಹವಾಮಾನ ಇಲಾಖೆ ಕೊಂಕಣ ಮತ್ತು ಗೋವಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮಧ್ಯಪ್ರದೇಶ, ಛತ್ತೀಸ್ಗಢ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಲಕ್ಷದ್ವೀಪ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.