ಬಹುಭಾಷಾ ನಟಿ ಮೀನಾ ಪತಿ ನಿಧನ

Share the Article

ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾ ಸಾಗರ್ ವಿಧಿವಶರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ನಟಿ ಮೀನಾ ಅವರ ಪತಿಯನ್ನು ದಾಖಲು ಮಾಡಲಾಗಿತ್ತು.

ಮಂಗಳವಾರ ರಾತ್ರಿ ಮೀನಾ ಪತಿ ವಿದ್ಯಾ ಸಾಗರ್ ನಿಧನ ಹೊಂದಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಅವರು ಬಳಲುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಟ್ವಿಟರ್‌ನಲ್ಲಿ ಹಲವಾರು ಗಣ್ಯರು ಮೀನಾಗೆ ಸಂತಾಪ ಸೂಚಿಸುತ್ತಿದ್ದಾರೆ.

ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಟಿಸಿರುವ ಮೀನಾ ಬೆಂಗಳೂರು ಮೂಲದ ವಿದ್ಯಾ ಸಾಗರ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ನೈನಿಕಾ ಎಂಬ ಮಗಳಿದ್ದಾಳೆ. ವಿದ್ಯಾ ಸಾಗರ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿವಾಹದ ಬಳಿಕ ವಿದ್ಯಾ ಸಾಗರ್ ಮತ್ತು ಮೀನಾ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave A Reply