ರಾಷ್ಟ್ರಪತಿ ಸ್ಥಾನಕ್ಕೆ ರೈತನಿಂದ ನಾಮಪತ್ರ !! | ಎಲ್ಲರ ಗಮನ ಸೆಳೆದಿರುವ ಈ ಅಭ್ಯರ್ಥಿ ಯಾರು ಗೊತ್ತಾ ???

ಬಿಜೆಪಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಹಾಗಿದ್ದರೂ ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ಪ್ರಬಲ ಅಭ್ಯರ್ಥಿಗಳ ನಡುವೆ ಪೈಟೋಟಿ ಏರ್ಪಟ್ಟಿರುವ ಹೊತ್ತಿನಲ್ಲೇ ರೈತರೊಬ್ಬರು ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ರೈತ ವಿನೋದ್ ಕುಮಾರ್ ಯಾದವ್ ತನಗೆ ಹಲವು ಸಂಸದರು, ಶಾಸಕರು ಹಾಗೂ ಸಚಿವರ ಬೆಂಬಲ ಇರುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.

10ನೇ ತರಗತಿ ವರೆಗೆ ಓದಿಕೊಂಡಿರುವ ವಿನೋದ್ ಕುಮಾರ್ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಇದರೊಂದಿಗೆ ರಾಜಕೀಯ ಚಟುವಟಿಕೆಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದ್ದ ವಿನೋದ್ ಇದೀಗ ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ.

ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿರುವ ಅವರು, 2005-06 ರಿಂದ ನಾನು ಸಕ್ರೀಯ ರಾಜಕಾರಣದಲ್ಲಿದ್ದೇನೆ. ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲೂ ಸ್ಪರ್ಧಿಸಿದ್ದೇನೆ. ಅಷ್ಟೇ ಅಲ್ಲದೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮೀಪದ ಗ್ರಾಮದವನೇ ಆಗಿದ್ದೇನೆ. ಹೀಗಾಗಿ ತನ್ನ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾನು 10 ರಾಜ್ಯಗಳ ನಾಯಕರು ಹಾಗೂ ಪಕ್ಷಗಳ ಜೊತೆ ಮಾತುಕತೆ ನಡೆಸಿದ್ದೇನೆ. ಎಲ್ಲರೂ ಬೆಂಬಲ ಸೂಚಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ನನ್ನ ಗೆಲುವು ಖಚಿತ. ಅಷ್ಟೇ ಅಲ್ಲ ತಾನು ಗೆದ್ದ ಬಳಿತ ತನ್ನ ಕಲಾನಿ ಗ್ರಾಮವನ್ನು ವಿಶ್ವವಿಖ್ಯಾತ ಮಾಡುತ್ತೇನೆ ಬೀಗಿದ್ದಾರೆ.

ಈವರೆಗೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಸೇರಿದಂತೆ 56 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಜೂನ್ 29ಕ್ಕೆ ನಾಮಪತ್ರ ಸಲ್ಲಿಕೆ ಅಂತಿಮವಾಗಲಿದ್ದು, ಜುಲೈ 2ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜುಲೈ 21ಕ್ಕೆ ಎತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟಗೊಳ್ಳಲಿದೆ.

Leave A Reply

Your email address will not be published.