ಅತಿಥಿ ಶಿಕ್ಷಕರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ | ಗೌರವಧನ ಹೆಚ್ಚಳಕ್ಕೆ ಸಿಎಂ ಅಸ್ತು
ರಾಜ್ಯ ಸರ್ಕಾರ ಅತಿಥಿ ಶಿಕ್ಷಕರಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಂಭಾವನೆ ಪರಿಷ್ಕರಣೆ ಮಾಡಿ ಈ ಹಿಂದೆ ಆದೇಶ ಹೊರಡಿಸಿತ್ತು. ಈಗ ಈ ಪರಿಷ್ಕರಣೆಯ ಮನವಿಗೆ ಸ್ಪಂದಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಆದೇಶಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳ ಎದುರಾಗಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇಮಕಾತಿ ಮಾಡಿಕೊಂಡಿರುವ, ಸದ್ಯ ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪರಿಷ್ಕರಿಸಿ ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.
ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಣೆಯ ಮನವಿಗೆ ಸ್ಪಂದಿಸಿ 2,500 ರೂಪಾಯಿಗೆ ಹೆಚ್ಚಳ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು ಎಂದು ಬಿಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.
ಬಹು ವರ್ಷಗಳ ಬೇಡಿಕೆಯಾದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಎರಡೂವರೆ ಸಾವಿರ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳ ಎದುರಾಗಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇಮಕಾತಿ ಮಾಡಿಕೊಂಡಿರುವ, ಸದ್ಯ ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪರಿಷ್ಕರಿಸಿ ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.
ಪ್ರಾಥಮಿಕ ಶಿಕ್ಷಕರಿಗೆ ಪ್ರಸ್ತುತ 7,500 ರೂ.ಗಳಿದ್ದು, ಅದನ್ನು 10,000 ರೂ.ಗೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಇನ್ನೂ ಸರ್ಕಾರಿ ಪ್ರೌಢ ಶಾಲೆಗಳ ಶಿಕ್ಷಕರಿಗೆ ಪ್ರಸ್ತುತ 8,000 ರೂ. ಇದ್ದು, 10,500 ರೂ.ಗೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ.