ಸಾಲ ಪಡೆಯುವ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್!

ದಾವಣಗೆರೆ: ಹೊಸ ಸಾಲ ಪಡೆಯುವ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್ ಇದ್ದು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುತ್ತಿರುವ ಸಾಲದ ಮೊತ್ತವನ್ನು ದ್ವಿಗುಣಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಮತ್ತು 10 ಲಕ್ಷ ರೂಪಾಯಿ ಸಾಲ ನೀಡಲಾಗುತ್ತಿದ್ದು, ಈ ಮೊತ್ತವನ್ನು ಹೆಚ್ಚಳ ಮಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಬಾರ್ಡ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿದ್ದು, 3 ಲಕ್ಷ ಹೊಸ ರೈತರು ಸೇರಿದಂತೆ 33 ಲಕ್ಷ ರೈತರಿಗೆ 24,000 ಕೋಟಿ ರೂ. ಸಾಲ ನೀಡಲು ನಿರ್ಧರಿಸಲಾಗಿದೆ. ಇದುವರೆಗೂ ಸಾಲ ಪಡೆದುಕೊಳ್ಳದ 3 ಲಕ್ಷ ರೈತರನ್ನು ಗುರುತಿಸಿ ಅವರಿಗೆ ಸಾಲ ನೀಡಲಾಗುತ್ತದೆ. ಹಾಗೆಯೇ, ಯಶಸ್ವಿನಿ ಯೋಜನೆಯನ್ನೂ ಆರಂಭಿಸಲಿದ್ದು, ಅಕ್ಟೋಬರ್ 2 ರಿಂದ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.