ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಣಾಜೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

Share the Article

ಕೊಣಾಜೆ:ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ವತಿಯಿಂದ ಸನ್ಮಾನ ಕಾರ್ಯಕ್ರಮ ಜೂನ್ 28ರ ಮಂಗಳವಾರ ಶಾಲೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ವಿಭಾಗದಲ್ಲಿ ಹೆಚ್ಚು ಅಂಕಗಳಿಸಿದ ಶಾಲಾ ವಿದ್ಯಾರ್ಥಿನಿ , ಮೂಲತಃ ಕಡಬ ತಾಲೂಕಿನ ಕುಂತೂರು ನಿವಾಸಿ ಧರ್ಮೇಂದ್ರ ಹಾಗೂ ಲಲಿತ ಜಿ.ಡಿ ಅವರ ಪುತ್ರಿ ದರ್ಶಿನಿ ಕೆ.ಡಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಶಾಲು ಹೊದಿಸಿ ಗೌರವಿಸಲಾಗಿದ್ದು,ಈ ಸಂದರ್ಭದಲ್ಲಿ ಶಾಸಕ ಯು.ಟಿ ಖಾದರ್, ಪ್ರಾಂಶುಪಾಲ ಮಹಾಬಲೇಶ್ವರ ನಾಯ್ಕ್ ಹಾಗೂ ಶಾಲಾ ಅಧ್ಯಾಪಕ ವೃಂದ ಸಹಿತ ಅಥಿತಿಗಳು, ಉಪಸ್ಥಿತರಿದ್ದರು.

Leave A Reply