ಈ ಮಾತುಗಳೊಂದಿಗೆ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ

ನವದೆಹಲಿ: ಮಹಾರಾಷ್ಟ್ರದಲ್ಲಿ ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ ಬಹುತೇಕ ತೆರೆ ಬಿದ್ದಂತಾಗಿದೆ. ಅಲ್ಲಿ ಹೊಸ ಸರ್ಕಾರದ ಅಸ್ತಿತ್ವಕ್ಕೆ ಕ್ಷಣಗಣನೆ ಆರಂಭವಾಗಿದೆ.ವಿಶ್ವಾಸಮತ ಯಾಚಿಸುವಂತೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಕ್ಷಣಗಳಲ್ಲಿ ಫೇಸ್‌ಬುಕ್ ಲೈವ್‌ ಬಂದಿದ್ದಾರೆ ಸಿಎಂ ಉದ್ಧವ್ ಠಾಕ್ರೆ. ಅಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ತಮ್ಮ ಎಂಎಲ್ ಸಿ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಎಂಎಲ್ ಸಿ ಸ್ಥಾನಕ್ಕೂ ಸೇರಿ ರಾಜೀನಾಮೆ ಘೋಷಿಸಿದ ಪರಿಣಾಮ, ಉದ್ಧವ್ ಠಾಕ್ರೆ ಪೂರಾ ಸೋಲೊಪ್ಪಿ ಕೊಂಡoತಾಗಿದೆ.ಇಂದು, ಜೂನ್ 30 ರಂದು ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಸಿಎಂ ಉದ್ಧವ್ ಠಾಕ್ರೆ ಅವರಿಗೆ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಶಿವಸೇನೆಯ ಮುಖ್ಯ ಸಚೇತಕ ಸುನಿಲ್ ಪ್ರಭು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದ್ದ ತನ್ನ ತೀರ್ಪು ಪ್ರಕಟಿಸಿದೆ. ಇದೀಗ ನಾಳೆ ಸದನದಲ್ಲಿ ವಿಶ್ವಾಸಮತ ಯಾಚಿಸುವಂತೆ ಆದೇಶಿಸಿತ್ತು.ಉದ್ಧವ್ ಠಾಕ್ರೆ ನೇತೃತ್ವದ ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ಬಿಕ್ಕಟ್ಟಿಗೆ ಕಾರಣವಾದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರ ಬಂಡಾಯದ ನಂತರ ಮಹಾರಾಷ್ಟ್ರದ ರಾಜಕೀಯದಲ್ಲಿ ಸಿಲುಕಿರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸದನದ ಏಕೈಕ ಮಾರ್ಗವೆಂದರೆ ಸದನದ ಏಕೈಕ ಮಾರ್ಗ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿತ್ತು.ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಗುರುವಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿಗೆ ಸೂಚಿಸಿದ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿತ್ತು. ಎಲ್ಲಾ ಕಡೆಯವರು ತಮ್ಮ ವಾದವನ್ನು ಮುಗಿಸಿದ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.ಶಿವಸೇನೆಯ ಮುಖ್ಯ ಸಚೇತಕ ಸುನಿಲ್ ಪ್ರಭು ಅವರ ಪರವಾಗಿ ವಾದಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮುಂದೆ ತುರ್ತು ವಿಚಾರಣೆ ನಡೆಸುವಂತೆ ಕೋರಿದ ನಂತರ ಈ ವಿಷಯವನ್ನು ವಿಚಾರಣೆಗೆ ತೆಗೆದುಕೊಳ್ಳಲಾಯಿತು. ಎರಡು ಕಡೆಯ ವಾದವನ್ನು ಆಲಿಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ನಾಳೆ ಬೆಳಿಗ್ಗೆ 11 ಗಂಟೆಗೆ ಮಹಾರಾಷ್ಟ್ರ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸಮತ ಯಾಚನೆಗೆ ಸೂಚಿಸಿತ್ತು. ಈ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ. ಏಕನಾಥ ಶಿಂಧೆ ಬಣಕ್ಕೆ ಮತ್ತೆ ಗೆಲುವಾಗಿದೆ.

ವಿಶ್ವಾಸಮತ ಯಾಚನೆಗೆ ಮುನ್ನವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದಂತ ಅವರು, ಕಳೆದ ಎರಡೂವರೆ ವರ್ಷಗಳ ಕಾಲ ನನಗೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದಗಳು ಎಂಬುದಾಗಿ ಹೇಳಿದ್ದಾರೆ.

ನನ್ನನ್ನು ಬೆಂಬಲಿಸಿದ್ದಕ್ಕಾಗಿ ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಜನರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಶಿವಸೇನೆ ಕಡೆಯಿಂದ ಅನಿಲ್ ಪರಬ್, ಸುಭಾಷ್ ದೇಸಾಯಿ ಮತ್ತು ಆದಿತ್ಯ ಠಾಕ್ರೆ ಮಾತ್ರವೇ ಪ್ರಸ್ತಾಪವನ್ನು ಅಂಗೀಕರಿಸಿದಾಗ ಮಾತ್ರ ಹಾಜರಿದ್ದರು ಮತ್ತು ಎನ್‌ಸಿಪಿ ಮತ್ತು ಕಾಂಗ್ರೆಸ್ ಜನರು ಸಹ ಪ್ರಸ್ತಾಪವನ್ನು ಬೆಂಬಲಿಸಿದರು. ನಾನು ಅನಿರೀಕ್ಷಿತ ರೀತಿಯಲ್ಲಿ ಅಧಿಕಾರಕ್ಕೆ ಬಂದಿದ್ದೆ. ಈಗ ಅದೇ ರೀತಿಯಲ್ಲಿ ಹೊರಡುತ್ತಿದ್ದೇನೆ. ನಾನು ಶಾಶ್ವತವಾಗಿ ಹೋಗುವುದಿಲ್ಲ, ನಾನು ಇಲ್ಲೇ ಇರುತ್ತೇನೆ ಮತ್ತು ಮತ್ತೊಮ್ಮೆ ಶಿವಸೇನಾ ಭವನದಲ್ಲಿ ಕುಳಿತುಕೊಳ್ಳುತ್ತೇನೆ. ನನ್ನ ಎಲ್ಲಾ ಜನರನ್ನು ನಾನು ಒಟ್ಟುಗೂಡಿಸುವೆನು. ನಾನು ಸಿಎಂ ಮತ್ತು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಉದ್ಧವ್‌ ಠಾಕ್ರೆ ಈ ಘೋಷಣೆ ಮಾಡಿದ ಬೆನ್ನಲ್ಲಿಯೇ, ರಾಜ್ಯಪಾಲ ಭಗತ್‌ ಸಿಂಗ್ ಕೋಶಿಯಾರಿ ರಾಜೀನಾಮೆ ಪತ್ರವನ್ನು ಅಂಗೀಕಾರ ಮಾಡಿದ್ದಾರೆ. ಇದರಿಂದಾಗಿ ಗುರುವಾರ ನಡೆಯಬೇಕಿರುವ ಮಹಾರಾಷ್ಟ್ರ ವಿಧಾನಸಭೆಯ ವಿಶ್ವಾಸಮತ ಯಾಚನೆ ನಡೆಯುವುದಿಲ್ಲ. ಈ ಮೂಲಕ ಮಹಾರಾಷ್ಟ್ರ ಸರ್ಕಾರ ಪತನಗೊಂಡಿದೆ.‌ ಹಾಗಾಗಿ ಬಿಜೆಪಿ ಹಾಗೂ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಬಣದ ಮೈತ್ರಿ ಸರ್ಕಾರ ಮಹಾರಾಷ್ಟ್ರದಲ್ಲಿ ಅಧಿಕಾರ ಸ್ಥಾಪಿಸಲು ತನ್ನ ಕೆಲಸ ಆರಂಭಿಸಿದೆ.

Leave A Reply

Your email address will not be published.