ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗವಕಾಶ| ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದವರಿಗೆ ಆದ್ಯತೆ

ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ  ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಪ್ಯೂನ್ ಸ್ಟೆನೋಗ್ರಾಫರ್ ಸೇರಿದಂತೆ ಒಟ್ಟು 32 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಎಸ್ಎಸ್‌ಎಲ್‌ಸಿ, ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 26 ಆಗಿದೆ.

ಸಂಸ್ಥೆಯ ಹೆಸರು: ಕೋಲಾರ ಇಕೋರ್ಟ್ (ಕೋಲಾರ ಜಿಲ್ಲಾ ನ್ಯಾಯಾಲಯ)
ಹುದ್ದೆಯ ಹೆಸರು: ಪ್ಯೂನ್, ಸ್ಟೆನೋಗ್ರಾಫರ್
ಹುದ್ದೆಗಳ ಸಂಖ್ಯೆ: 32
ಉದ್ಯೋಗ ಸ್ಥಳ: ಕೋಲಾರ
ವೇತನ: ರೂ.17000-52650ರೂ ಪ್ರತಿ ತಿಂಗಳು

ವಯಸ್ಸಿನ ಮಿತಿ: ಕೋಲಾರ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯುಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯಸ್ಸಿನ ಸಡಿಲಿಕೆ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ  : 3 ವರ್ಷಗಳು

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಹಾಗೂ ಪ್ರವರ್ಗ 1 ಅಭ್ಯರ್ಥಿಗಳು: 100 ರೂ ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 200 ರೂ

ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕ :  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27, ಜೂನ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26, ಜುಲೈ 2022
ಬ್ಯಾಂಕ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 28 ಜುಲೈ 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್‌ಸೈಟ್: districts.ecourts.gov.in

ಅರ್ಜಿ ಸಲ್ಲಿಕೆ ವಿಧಾನ :
ಅಭ್ಯರ್ಥಿಗಳು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿಬೇಕು ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳು.

-ಮೇಲಿನ ಲಿಂಕ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

-ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.

ಅಪ್ಲೈ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ

ಪ್ಯೂನ್ ಪೋಸ್ಟ್ ಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಸ್ಟೇನೋಗ್ರಾಫರ್ ಫೋಸ್ಟ್ ಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.