ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ | ಬರೋಬ್ಬರಿ 90 ಎನ್ ಐಎ ಅಧಿಕಾರಿಗಳ ತಂಡದಿಂದ ದಾಳಿ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ನಡೆದಿದೆ.

 

ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಎನ್‌ ಐಎ ಅಧಿಕಾರಿಗಳು ಬಂದಿದ್ದು, ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಜಿಲ್ಲೆಗೆ ಆಗಮಿಸಿದೆ. ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳಿಂದ ದಾಳಿ ನಡೆದಿದೆ. ಇಂದು ಬೆಳಗ್ಗೆ ಐದು ಗಂಟೆಗೆ ಈ ದಾಳಿ ಆರಂಭವಾಯಿತು.

ಶಿವಮೊಗ್ಗ ಜಿಲ್ಲೆಯಲ್ಲಿ 13 ಕಡೆ ದಾಳಿ ನಡೆಸಿ ವಿಚಾರಣೆ ಮಾಡಲಾಯಿತು. ಬೆಳಗ್ಗೆ 10 ಗಂಟೆಯೊಳಗೆ ವಿಚಾರಣೆ ಮುಗಿಸಿ ವಾಪಸ್ ಆಗಿದ್ದಾರೆ. ಹರ್ಷ ಕೊಲೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಆರೋಪಿಗಳು ಹಾಗೂ ಅವರ ಸಂಬಂಧಿಕರ ವಿಚಾರಣೆ ನಡೆಸಿದ್ದಾರೆ.ವಿಚಾರಣೆ ವೇಳೆ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ಇದುವರೆಗೆ ಒಟ್ಟು 450 ಮಂದಿಯನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

Leave A Reply

Your email address will not be published.