ಬಿರುಸಿನ ಮಳೆ : ದ.ಕ, ಉಡುಪಿ ಜಿಲ್ಲೆಯಲ್ಲಿ ನಾಳೆ ( ಜುಲೈ 1) ಕೂಡಾ ಶಾಲಾ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜುಲೈ 1ರ ರುಕ್ರವಾರ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಸುರಿದ ಭಾರೀ ಮಳೆಯ ಕಾರಣದಿಂದಾಗಿ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದ್ದು, ನಾಳೆ ಕೂಡಾ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶುಕ್ರವಾರ ರಜೆ ಘೋಷಿಸಲು ನಿರ್ಧರಿಸಿದೆ. ದಕ್ಷಿಣ ಕನ್ನಡದ ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ಸಾರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಶುಕ್ರವಾರದ ಬೆಳಗ್ಗೆ 8.30ರವರಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಆದರೆ ನಾಳೆಯ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಎಲ್ಲಾ ಅಂಗನವಾಡಿ ಶಾಲೆ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಜಿಲ್ಲಾಡಳಿತವು ರಜೆ ಘೋಷಿಸಿದೆ.
ಮತ್ತೊಂದೆಡೆ ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆ ಸುರಿಯುತ್ತಿರುವಂತ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶಿಸಿದ್ದಾರೆ.