ಕೆಜಿಎಫ್-2 ನಟನ ಐಷಾರಾಮಿ ಕಾರು ಕ್ಯಾಂಟರ್ ಡಿಕ್ಕಿ, ಕಾರು ಸಂಪೂರ್ಣ ನುಜ್ಜುಗುಜ್ಜು

Share the Article

ಬೆಂಗಳೂರು: ಕೆಜಿಎಫ್-2 ಚಿತ್ರದ ಮೂಲಕ ಸಖತ್ ಸದ್ದು ಮಾಡಿದ್ದಂತ ಬಿಎಸ್ ಅವಿನಾಶ್ ಅವರ ಕಾರು ಅಪಘಾತಗೊಂಡಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ.

ಕೆಜಿಎಫ್ ಚಿತ್ರದಲ್ಲಿ ಆಂಡ್ರೋಸ್ ಎಂಬ ವಿಲನ್ ಪಾತ್ರದಲ್ಲಿ ಮಿಂಚಿದ್ದಂತ ಬಿಎಸ್ ಅವಿನಾಶ್ ಅವರು ಇಂದು ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ನಲ್ಲಿ ಕಾರಿನಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ ಅಪಘಾತಗೊಂಡಿದೆ. ಅವರ ಬೆಂಚ್ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ, ಆ ಐಷಾರಾಮಿ ಕಾರಿನ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಬೆಳಿಗ್ಗೆ 6 ಗಂಟೆಗೆ ಜಿಮ್ ಗೆ ಹೋಗುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ.

ಈ ಸಂಬಂಧ ಕ್ಯಾಂಟರ್ ಚಾಲಕನನ್ನು ಪೊಲೀಸರು ವಶಪಡೆಸಿದ್ದಾರೆ. ನಟ ಅವಿನಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply