ಕರಾವಳಿ ಮೂಲದ ಮಹಿಳೆ ಬೆಂಗಳೂರಿನಲ್ಲಿ ಮೂರುವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆ

ಬೆಂಗಳೂರು ಸಿಲಿಕಾನ್‌ ಸಿಟಿಯಲ್ಲಿ ತನ್ನ ಮೂರುವರೆ ವರ್ಷದ ಮಗುವಿನ ಕುತ್ತಿಗೆಗೆ ಶಾಲ್‌ ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ʻನನ್ನ ಸಾವಿಗೆ ಯಾರೂ ಕಾರಣರಲ್ಲʼ , ʻಸ್ವಾರಿ ಅಮ್ಮʼ ಎಂದು ಡೆತ್‌ ನೋಟ್‌ ಬರೆದಿಟ್ಟು ಮಹಿಳೆ ಆರ್‌ ಆರ್‌ ನಗರದಲ್ಲಿ ಮೃತಪಟ್ಟಿದ್ದಾರೆ. ಮಗು ರಿಯಾಳನ್ನ ಕೊಂದ ತಾಯಿ ದೀಪಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೀಪಾ ಅವರು RR ನಗರದ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ಕಳೆದ ಒಂದು ವಾರದಿಂದ ಜ್ವರ ಮತ್ತು ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಜ್ವರ ಮತ್ತು ಹೊಟ್ಟೆ ನೋವು ಹಿನ್ನೆಲೆ ಚಿಕಿತ್ಸೆ ಕೂಡಾ ಪಡೆಯುತ್ತಿದ್ದರು. ಡೆತ್ ನೋಟ್ ನಲ್ಲಿ” Nobody is responsible for it i just felt life is full of shits i am sorry mom and divya Love you shona ಎಂದು ದೀಪಾ ಬರೆದಿದ್ದಾರೆ. ಇನ್ನೂ ಸ್ಥಳದಲ್ಲಿ ಆರ್ ಆರ್ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ದೀಪಾ ಅವರು ಬ್ರಹ್ಮಾವರ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಕುಟುಂಬದ ಜೊತೆ ವಾಸವಾಗಿದ್ದರು. ದೀಪಾ ಅವರ ಪತಿ ಆದರ್ಶ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾರೆ. 2017ರಲ್ಲಿ ದೀಪಾ ಮತ್ತು ಆದರ್ಶ್ ಅವರ ಮದುವೆ ಆಗಿತ್ತು. ಮದ್ವೆಯಾದಗಿನಿಂದಲೂ ಆರ್ ಆರ್ ನಗರದ ಮಂತ್ರಿ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ವಾರದಿಂದ ಜ್ವರ ಹಾಗೂ ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು. ಚಿಕಿತ್ಸೆ ಪಡೆದರೂ ನೋವು ಕಡಿಮೆ ಆಗಿರಲಿಲ್ಲ. ಹೀಗಾಗಿ ದೀಪಾ ಜಿಗುಪ್ಸೆಗೊಂಡಿದ್ದರು ಎಂದು ತಿಳಿದು ಬಂದಿದ್ದು, ರಾತ್ರಿ ಎಲ್ಲರೂ ಮಲಗಿದ್ದ ವೇಳೆ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ನೇಣು ಹಾಕಿ ಕೊಲೆ ಮಾಡಿದ್ದಾರೆ.

Leave A Reply

Your email address will not be published.