ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ, ದೂರು ದಾಖಲು!

ಸುಳ್ಯ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯೊಂದು ಸುಳ್ಯದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧ ಪಟ್ಟಂತೆ ಯುವಕನೋರ್ವ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಫೋಕ್ಸ್‌ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಪುತ್ತೂರು ಗ್ರಾಮದ ಅರಿಯಡ್ಕ ನಿವಾಸಿ ಸಂದೀಪ (22) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕಿಗೆ ಈ ಯುವಕ ದೂರದ ಸಂಬಂಧಿ. ಹಾಗಾಗಿ ಇಬ್ಬರೂ ಕೆಲ ಸಮಯದಿಂದ ದೂರವಾಣಿ ಮೂಲಕ ಮಾತನಾಡುತ್ತಿದ್ದರೆಂದು, ಕೆಲ ತಿಂಗಳ ಹಿಂದೆ ಬಾಲಕಿಯ ದೊಡ್ಡಪ್ಪನ ಮನೆಯಲ್ಲಿ ಪೂಜೆಗೆ ಸಂದೀಪ ಹೋಗಿದ್ದು ರಾತ್ರಿ ವೇಳೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ನಂತರ ಬೆದರಿಕೆ ಕೂಡಾ ಹಾಕಿದ್ದನೆಂದು ದೂರಿನಲ್ಲಿ ತಿಳಿಸಲಾಗಿದೆ.

ಜೂ.22 ರಂದು ಅಪ್ರಾಪ್ತ ಬಾಲಕಿಯನ್ನು ಆಕೆಯ ಅಕ್ಕ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಳೆ. ಅಲ್ಲಿ ಪರೀಕ್ಷೆಗೊಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಈ ಬಗ್ಗೆ ಜೂ.28 ರಂದು ಸಂದೀಪ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply

Your email address will not be published.