ದತ್ತಪೀಠ ವಿಷಯದಲ್ಲಿ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ; ವರದಿಯ ಶಿಫಾರಸಿಗೆ ಅನುಮೋದನೆ

ದತ್ತಪೀಠದಲ್ಲಿ‌ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಮಾಡುವಂತೆ ರಾಜ್ಯ ಸಚಿವ ಸಂಪುಟ ಉಪಸಮಿತಿ ಸಭೆ ಸರಕಾರಕ್ಕೆ ಶಿಫಾರಸು ಮಾಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆಯನ್ನು ನೀಡಲಾಗಿದೆ.

ದತ್ತ ಪೀಠದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಸಂಬಂಧ ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ

ದತ್ತಪೀಠಕ್ಕೆ ಅರ್ಚಕರ ನೇಮಕ ಮಾಡುವಂತೆ ಸುದೀರ್ಘ ಕಾಲದಿಂದ ಒತ್ತಾಯಿಸಲಾಗುತ್ತಿತ್ತು. ಆದರೆ, ಸಿದ್ದರಾಮಯ್ಯರ ನೇತೃತ್ವದ ಹಿಂದಿನ ಕಾಂಗ್ರೆಸ್ ಸರಕಾರವು ಹಿಂದೂಗಳ ಈ ಕೋರಿಕೆಯನ್ನು ಪುರಸ್ಕರಿಸಲಿಲ್ಲ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರವು ಅದನ್ನು ಪುರಸ್ಕರಿಸಿದೆ. ಇದು ದೀರ್ಘ ಕಾಲದ ಹೋರಾಟಕ್ಕೆ ಸಂದ ಜಯ ಎಂದು ಸಿಟಿ ರವಿ ಹೇಳಿದರು.

ವರದಿಯ ಶಿಫಾರಸುಗಳು:

 ವಾರ್ಷಿಕ ಧಾರ್ಮಿಕ ಕಾರ್ಯಕ್ರಮಗಳ ದಿನಚರಿ ರೂಪಿಸಲು ವ್ಯವಸ್ಥಾಪನಾ ಸಮಿತಿಗೆ ಜವಾಬ್ದಾರಿ

 ದರ್ಗಾ ಪೂಜೆ ಹಾಗೂ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಎರಡು ಸಮುದಾಯಕ್ಕೆ ಅವಕಾಶ

 ವ್ಯವಸ್ಥಾಪನಾ ಸಮಿತಿಗೆ ಅರ್ಚಕ ಹಾಗೂ ಮುಜಾವರ ನೇಮಕಾತಿ ಜವಾಬ್ದಾರಿ

 ವ್ಯವಸ್ಥಾಪನಾ ಸಮಿತಿಯಿಂದ ಊರೂಸ್ ಹಾಗೂ ಪೂಜಾ ಪುನಸ್ಕಾರಗಳ ಮೇಲ್ವಿಚಾರಣೆ

 ಪೂಜೆ ಮಾಡಲು ಅರ್ಚಕರು ಹಾಗೂ ಮುಜಾವರರಿಗೆ ಅವಕಾಶ

Leave A Reply

Your email address will not be published.