ರಾಷ್ಟ್ರೀಯ ವೈದ್ಯರ ದಿನವನ್ನು ಏಕೆ ಆಚರಿಸಲಾಗುತ್ತದೆ ಈ ವರ್ಷದ ಘೋಷವಾಕ್ಯವೇನು?

ರಾಷ್ಟ್ರೀಯ ವೈದ್ಯರ ದಿನವನ್ನು ಭಾರತದಲ್ಲಿ ಪ್ರತಿ ವರ್ಷ ಜುಲೈ 1 ರಂದು ಆಚರಿಸಲಾಗುತ್ತದೆ. ವೈದ್ಯರನ್ನು ಗೌರವಿಸಲು ಮತ್ತು ದಿನದ 24 ಗಂಟೆಯೂ ನಿಸ್ವಾರ್ಥವಾಗಿ ಜನರಿಗೆ ಸೇವೆ ಸಲ್ಲಿಸುವ ವೈದ್ಯಕೀಯ ವೃತ್ತಿಪರರಿಗೆ ಕೃತಜ್ಞತೆ ತೋರ್ಪಡಿಸಲು ಈ ದಿನ ಆಚರಣೆ ಮಾಡಲಾಗುತ್ತದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

1991 ರಲ್ಲಿ ಭಾರತ ಸರ್ಕಾರವು ಪ್ರತಿ ವರ್ಷ ಜುಲೈ 1 ರಂದು ವೈದ್ಯರ ದಿನವನ್ನಾಗಿ ಆಚರಿಸಲು ಪ್ರಾರಂಭ ಮಾಡಿತು. ಭಾರತ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೈದ್ಯರ ದಿನ ಆಚರಿಸಲಾಗುತ್ತದೆ, ಆದರೆ ಈ ದಿನಾಚರಣೆಯನ್ನು ಆಚರಿಸುವ ದಿನಾಂಕಗಳು ಮಾತ್ರ ವಿಭಿನ್ನವಾಗಿವೆ. ಈ ವರ್ಷ ನಮ್ಮ ದೇಶದಲ್ಲಿ, “ಕುಟುಂಬ ವೈದ್ಯರಿಗೆ ಮೊದಲ ನಮನ” ಎಂಬ ಘೋಷವಾಕ್ಯದೊಂದಿಗೆ ವೈದ್ಯರ ದಿನವನ್ನು ಆಚರಿಸಲಾಗುತ್ತಿದೆ. 

ಡಾ. ಬಿಧಾನ್ ಅವರಿಗೆ 1961 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ‘ಭಾರತ ರತ್ನ’ ನೀಡಲಾಯಿತು. ಡಾ. ಬಿಧಾನ್ ಅವರು ಸಮಾಜದ ಕಲ್ಯಾಣಕ್ಕಾಗಿ ಅಪಾರ ಕೊಡುಗೆ ನೀಡಿದರು ಮತ್ತು ಭಾರತದಲ್ಲಿ ಅನೇಕ ವೈದ್ಯಕೀಯ ಸಂಸ್ಥೆಗಳನ್ನು ಸ್ಥಾಪಿಸಲು ಸಹಾಯ ಮಾಡಿದರು. ಭಾರತೀಯ ವೈದ್ಯಕೀಯ ಮಂಡಳಿ ಮತ್ತು ಭಾರತೀಯ ವೈದ್ಯಕೀಯ ಸಂಘ (IMA) ಈ ಎರಡು ಸಂಸ್ಥೆಗಳ ಸ್ಥಾಪನೆಯಲ್ಲಿ ಡಾ. ಬಿಧಾನ್ ಚಂದ್ರ ರಾಯ್ ಅವರ ಕೊಡುಗೆ ಅಪಾರ. ಡಾ. ಬಿಧಾನ್ ಚಂದ್ರ ರಾಯ್ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಈ ದಿನ ಸ್ಮರಿಸಲಾಗುತ್ತದೆ.

error: Content is protected !!
Scroll to Top
%d bloggers like this: