IBPS : 6035 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆಗೆ 21 ಜುಲೈ ಕೊನೆಯ ದಿನಾಂಕ

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ವಿವಿಧ ಬ್ಯಾಂಕ್‌ಗಳಿಗೆ 2023-24ನೇ ಸಾಲಿಗೆ ಒಟ್ಟು 6035 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಸಾಮಾನ್ಯ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಯಾವುದೇ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ.

ಕ್ಲರ್ಕ್ ಹುದ್ದೆಗಳಲ್ಲಿ ಆಸಕ್ತಿ ಇರುವ ಇಂಜಿನಿಯರಿಂಗ್ ಪದವೀಧರರು / ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ / ಪದವಿ ತತ್ಸಮಾನ ವಿದ್ಯಾರ್ಹತೆಯುಳ್ಳವರು ಈ ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಕೆ ವಿಧಾನವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

ನೇಮಕಾತಿ ಪ್ರಾಧಿಕಾರ / ಸಂಸ್ಥೆ : ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ
ಹುದ್ದೆ ಹೆಸರು : ಕ್ಲರಿಕಲ್ ಕೇಡರ್ ಹುದ್ದೆಗಳು
ಹುದ್ದೆಗಳ ಸಂಖ್ಯೆ : ಭಾರತದಾದ್ಯಂತ 6,035
ನೇಮಕಾತಿ ಪ್ರಾಧಿಕಾರ / ಸಂಸ್ಥೆ : ಬ್ಯಾಂಕಿಂಗ್ ಸಿಬ್ಬಂದಿ
ನೇಮಕಾತಿ ಸಂಸ್ಥೆ
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ : 358

ಪ್ರಮುಖ ದಿನಾಂಕಗಳು

ಆನ್‌ಲೈನ್ ಅರ್ಜಿಗೆ ಆರಂಭಿಕ ದಿನಾಂಕ : 01-07-2022
ಆನ್‌ಲೈನ್ ಅರ್ಜಿಗೆ ಕೊನೆ ದಿನಾಂಕ: 21-07-2022
ಅಪ್ಲಿಕೇಶನ್ ತಿದ್ದುಪಡಿಗೆ ಕೊನೆ ದಿನಾಂಕ : 21-07-2022
ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ:
21-07-2022
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 21-07-2022
ಕ್ಲರ್ಕ್ ಪ್ರಿಲಿಮ್ಸ್ ಟ್ರೈನಿಂಗ್‌ಗೆ ಪ್ರವೇಶ ಪತ್ರ
ಡೌನ್‌ಲೋಡ್ ದಿನಾಂಕ: ಆಗಸ್ಟ್ 2022
ಕ್ಲರ್ಕ್ ಪ್ರಿಲಿಮ್ಸ್ ತರಬೇತಿ ನಡೆಸುವ ಅವಧಿ : ಆಗಸ್ಟ್
2022
ಪೂರ್ವ ಭಾವಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ : ಆಗಸ್ಟ್
2022
ಪೂರ್ವಭಾವಿ ಪರೀಕ್ಷೆ ದಿನಾಂಕ : ಸೆಪ್ಟೆಂಬರ್ 2022
ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ದಿನಾಂಕ: ಸೆಪ್ಟೆಂಬರ್ |
ಅಕ್ಟೋಬರ್ 2022
ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ : ಸೆಪ್ಟೆಂಬರ್ / ಅಕ್ಟೋಬರ್
ಮುಖ್ಯ ಪರೀಕ್ಷೆ ದಿನಾಂಕ : ಅಕ್ಟೋಬರ್ 2022
ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ : ಏಪ್ರಿಲ್ 2023

ಐಬಿಪಿಎಸ್ ಕ್ಲೆರಿಕಲ್ ಕೇಡರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಗಿದ ನಂತರ ಬ್ಯಾಂಕ್ ಆಫ್ ಬರೋಡ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟರ, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯಾ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಪಂಜಾಬ್ ಅಂಡ್ ಸಿಂದ್ ಬ್ಯಾಂಕ್, ಯುಸಿಒ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಗಳಲ್ಲಿ ಅಭ್ಯರ್ಥಿಗಳನ್ನು ಕ್ಲರ್ಕ್ ಹುದ್ದೆಗೆ ನೇಮಕ ಮಾಡಲಾಗುತ್ತದೆ.

ವಯೋಮಿತಿ : ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಣ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, PWD ಅಭ್ಯರ್ಥಿಗಳಿಗೆ 10 ವಯೋಮಿತಿ ಸಡಿಲಿಕೆ ನಿಯಮ

ವಿದ್ಯಾರ್ಹತೆ : ಯಾವುದೇ ಪದವಿ ಪಾಸ್ ಆಗಿರಬೇಕು.

ನೇಮಕ ಪ್ರಕ್ರಿಯೆ: ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ಪ್ರಿಲಿಮ್ಸ್ ಪರೀಕ್ಷೆ 100 ಅಂಕಗಳಿಗೆ ಮತ್ತು ಮುಖ್ಯ ಪರೀಕ್ಷೆ 200 ಅಂಕಗಳಿಗೆ ನಡೆಸಲಾಗುತ್ತದೆ. ಪೂರ್ವಭಾವಿ ಪರೀಕ್ಷೆಗೆ ಆನ್‌ಲೈನ್ ತರಬೇತಿ ಸಹ ಇರುತ್ತದೆ.

ಪರೀಕ್ಷೆ ಭಾಷೆ : ಕರ್ನಾಟಕ ಅಭ್ಯರ್ಥಿಗಳಿಗೆ ಇಂಗ್ಲಿಷ್, ಹಿಂದಿ, ಕನ್ನಡ, ಕೊಂಕಣಿ ಭಾಷೆಗಳಲ್ಲಿ ನಡೆಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.