BIG NEWS: ಕನ್ನಡ ಬಿಗ್ ಬಾಸ್ ಗೆ ದಿನಗಣನೆ ಶುರು | ಯಾರೆಲ್ಲ ಕಂಟೆಸ್ಟೆಂಟ್ ?

”ಹೌದು ಸ್ವಾಮೀ”: ಬಿಗ್ ಬಾಸ್ ಮತ್ತೆ ಬರ್ತಿದ್ದಾರೆ. ಕನ್ನಡ ಬಿಗ್ ಬಾಸ್ ಯಾವಾಗ ಎನ್ನುವ ಕುತೂಹಲವೊಂದು ಎಲ್ಲರಲ್ಲೂ ಇತ್ತು. ಈ ರಿಯಾಲಿಟಿ ಶೋ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರುತ್ತಿರುತ್ತಿದೆ. ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಯಾವಾಗ ಎನ್ನುವ ಪ್ರಶ್ನೆಗೆ ಈಗ ಉತ್ತರ ದೊರಕಿದೆ. ಬಿಗ್ ಬಾಸ್ ಸೀಸನ್ ಅದು ಕೂಡಾ ಕನ್ನಡ ಬಿಗ್ ಬಾಸ್ ಗೆ ಕಿರುತೆರೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಬಿಗ್ ಬಾಸ್ ಸೀಸನ್ 9 ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ. ಹೌದು, ಬಹುನಿರೀಕ್ಷೆಯ ಬಿಗ್ ಬಾಸ್ ಆಗಸ್ಟ್ ಮೊದಲ ವಾರದಿಂದ ಆರಂಭವಾಗಲಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ.

 

ಸಾಮಾಜಿಕ ಮತ್ತು ಸಿನಿ ಜಗತ್ತಿನ ದೊಡ್ಡವರಲ್ಲಿ ಹಲವರು ಬಿಗ್ ಬಾಸ್ ಮನೆಗೆ ಬಂದು ವಾಸ ಮಾಡಲಿದ್ದಾರೆ. ದೊಡ್ಡವರ ‘ಸಣ್ಣ ‘ತನಗಳನ್ನು ಕೂಡಾ ಜಗತ್ತು ವೀಕ್ಷಿಸಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಸಹ ವೂಟ್ ಸೆಲೆಕ್ಟ್ ನಲ್ಲಿಯೂ ಬಿಗ್ ಬಾಸ್ ಪ್ರಸಾರವಾಗಲಿದೆ. ಓಟಿಟಿಯಲ್ಲಿ ಮತ್ತು ಕಲರ್ಸ್ ವಾಹಿನಿಯಲ್ಲಿ ಎರಡು ರೀತಿಯ ಬಿಗ್ ಬಾಸ್ ಸೀಸನ್‌ಗಳನ್ನು ಪ್ರಸಾರ ಮಾಡಲು ಕಲರ್ಸ್ ಸಂಸ್ಥೆ ನಿರ್ಧರಿಸಿದೆ. ಈ ಬಾರಿ ಕಲರ್ಸ್ ವಾಹಿನಿಯಲ್ಲಿ ಬಿಗ್ ಬಾಸ್ ಪ್ರಸಾರ ಆರಂಭವಾಗುವ ಮೊದಲೇ ವೂಟ್ ಸೆಲೆಕ್ಟ್ ನಲ್ಲಿ ಬಿಗ್ ಬಾಸ್ ಮಿನಿ ಸೀಸನ್ ಪ್ರಸಾರವಾಗಲಿದೆ. ಈ ಮಿನಿ ಸೀಸನ್ 42 ದಿನಗಳ ಕಾಲ ಪ್ರಸಾರವಾಗಲಿದ್ದು, ಇಂಟರ್‌ನೆಟ್ ಸ್ಟಾರ್‌ಗಳು, ಇನ್‌ಪ್ಲುಯೆನ್ಸರ್‌ಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮಿನಿ ಸೀಸನ್‌ನಲ್ಲಿ ಆಯ್ಕೆಯಾದ ಒಂದಿಬ್ಬರು ಸ್ಪರ್ಧಿಯಲ್ಲಿ ವಾಹಿನಿಯಲ್ಲಿ ಪ್ರಸಾರವಾಗುವ ಪೂರ್ಣ ಪ್ರಮಾಣದ ಬಿಗ್ ಬಾಸ್‌ನಲ್ಲಿ ಭಾಗವಹಿಸುತ್ತಾರೆ. ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ 90 ದಿನಗಳ ಕಾಲ ಪ್ರಸಾರವಾಗಲಿದೆ.

ಈ ರೀತಿಯ ಪ್ರಯತ್ನ ಕಳೆದ ಬಾರಿ ಹಿಂದಿಯಲ್ಲಿ ಮಾಡಲಾಗಿತ್ತು. ಹಿಂದಿಯಲ್ಲಿ ಕರಣ್ ಜೋಹರ್ ನಡೆಸಿಕೊಟ್ಟಿದ್ದರು. ಒಟಿಟಿ ಬಳಿಕ ಬಿಗ್ ಬಾಸ್ ಟಿವಿಯಲ್ಲಿ ಪ್ರಸಾರವಾಗಿತ್ತು. ಈ ಬಾರಿ ಕನ್ನಡದಲ್ಲೂ ಅದೇ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಕನ್ನಡದಲ್ಲಿ ಪ್ರಸಾರವಾಗುವ ಒಟಿಟಿ ಬಿಗ್ ಬಾಸ್ ಅನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡೆಸಿಕೊಡಲಿದ್ದು, 90 ದಿನಗಳ ಟಿವಿಯಲ್ಲಿ ಆರಂಭವಾಗುವ ಬಿಗ್ ಬಾಸ್ ಜವಾಬ್ದಾರಿ ಕೂಡಾ ಸುದೀಪ್ ನಡೆಸಿಕೊಡಲಿದ್ದಾರೆ.

Leave A Reply

Your email address will not be published.