ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-57, ಅರ್ಜಿ ಸಲ್ಲಿಸಲು ಕೊನೆದಿನ-ಜುಲೈ 14

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಇರುವ 57 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಈ ಹುದ್ದೆಗಳನ್ನು ಡೆಪ್ಯೂಟೆಶನ್​ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಸಂಸ್ಥೆಯ ಹೆಸರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO)
ಹುದ್ದೆಯ ಹೆಸರು: ಮುಖ್ಯ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್
ಹುದ್ದೆಗಳ ಸಂಖ್ಯೆ: 57
ಉದ್ಯೋಗ ಸ್ಥಳ: ಅಖಿಲ ಭಾರತ
ವೇತನ: 8700-39100ರೂ ಪ್ರತಿ ತಿಂಗಳು

ಹುದ್ದೆ, ಹುದ್ದೆ ಸಂಖ್ಯೆ, ವೇತನ:

ಮುಖ್ಯ ಇಂಜಿನಿಯರ್, 1ಲೆವೆಲ್​ 11 ಮ್ಯಾಟ್ರಿಕ್ಸ್ ಅನ್ವಯ
ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್) 1 15600-39100 ರೂ
ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) 1 15600-39100 ರೂ
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) 18 15600-39100 ರೂ
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್) 3 15600-39100 ರೂ
ಜೂನಿಯರ್ ಇಂಜಿನಿಯರ್ (ಸಿವಿಲ್) 32 9300-34800 ರೂ
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) 1 9300-34800 ರೂ

ವಿದ್ಯಾರ್ಹತೆ:
ಮುಖ್ಯ ಎಂಜಿನಿಯರ್: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಸಿವಿಲ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಇಪಿಎಫ್‌ಒ ನೇಮಕಾತಿ ನಿಯಮಗಳ ಪ್ರಕಾರ
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್/ಸಿವಿಲ್): ಎಲೆಕ್ಟ್ರಿಕಲ್/ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ

ವಯಸ್ಸಿನ ಮಿತಿ:
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ : ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 30, 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 14, 2022

ಅರ್ಜಿ ಸಲ್ಲಿಕೆ ವಿಧಾನ :

*ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
*ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
*ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ​ ವಿಳಾಸಕ್ಕೆ ಕಳುಹಿಸಬೇಕು.

ಮೋಹಿತ್ ಕುಮಾರ್ ಶೇಖರ್, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು (HRM), ಭವಿಷ್ಯ ನಿಧಿ ಭವನ, 14 ಭಿಕೈಜಿಕರ್ನಾ ಪ್ಲೇಸ್, ನವದೆಹಲಿ – 110066

ಅಧಿಕೃತ ವೆಬ್‌ಸೈಟ್: epfindia.gov.in

Leave A Reply

Your email address will not be published.