ಇದೇ ಡಿಸೆಂಬರ್ ಒಳಗೆ NEP ಪಠ್ಯಕ್ರಮ – ಸಚಿವ ಬಿ.ಸಿ.ನಾಗೇಶ್

Share the Article

ಮಂಗಳೂರು : ಕರ್ನಾಟಕ ಬರುವ ಡಿಸೆಂಬರ್ ತಿಂಗಳೊಳಗೆ  ಪದವಿಪೂರ್ವ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ (NEP) ಪಠ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ.

ರಾಜ್ಯದ ಪದವಿಪೂರ್ವ ತರಗತಿಗಳಿಗೆ ಪಠ್ಯಕ್ರಮವನ್ನು ಡಿಸೆಂಬರ್ ಅಂತ್ಯದೊಳಗೆ ಅಂತಿಮಗೊಳಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

ಪಿಯುಸಿ ತರಗತಿಗಳಿಗೆ ಹೊಸ ಶಿಕ್ಷಣ ನೀತಿಯಡಿ ಪಠ್ಯಕ್ರಮ ಅಳವಡಿಸಲಾಗುತ್ತದೆ. ಇನ್ನು, 1 ರಿಂದ 12 ನೇ ತರಗತಿವರೆಗಿನ ಪಠ್ಯಕ್ರಮವನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Leave A Reply