ರಾಜ್ಯ ಸರಕಾರದಿಂದ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹೊಸ ಕಾನೂನು !

Share the Article

ಸಫಾಯಿ ಕರ್ಮಚಾರಿ ಮತ್ತು ಪೌರಕಾರ್ಮಿಕರ ಸಂಘವು ಎಲ್ಲಾ ನೈರ್ಮಲ್ಯ ಕಾರ್ಮಿಕರಿಗೆ ಖಾಯಂ ಉದ್ಯೋಗ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸರಕಾರ ಪೌರ ಕಾರ್ಮಿಕರ ಕುರಿತು ಹೊಸ ಕಾನೂನೊಂದನ್ನು ಜಾರಿಗೆ ತಂದಿದೆ.

ರಾಜ್ಯ ಸರಕಾರ ಪೌರಕಾರ್ಮಿಕರ ಕಲ್ಯಾಣ, ಆರೋಗ್ಯ ಮತ್ತು ಶಿಕ್ಷಣವನ್ನು ಭದ್ರಪಡಿಸಲು ಹೊಸ ಕಾನೂನೊಂದನ್ನು ತರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಸ್ತುತ ಗುತ್ತಿಗೆಯಲ್ಲಿರುವ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಸರ್ಕಾರ ತಾತ್ವಿಕವಾಗಿ ಒಪ್ಪಿಕೊಂಡಿದೆ. ಮುಂದಿನ ಮೂರು ತಿಂಗಳಲ್ಲಿ ಪೌರಕಾರ್ಮಿಕರು ಮತ್ತು ಅಧಿಕಾರಿಗಳನ್ನು ಒಳಗೊಂಡ ಜಂಟಿ ಸಮಿತಿಯು ಅವರ ಕೆಲಸವನ್ನು ಕಾಯಂಗೊಳಿಸುವ ತಾಂತ್ರಿಕ ಮತ್ತು ಕಾನೂನು ಅಂಶಗಳನ್ನು ಪರಿಶೀಲಿಸಲಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಇನ್ನು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಪೌರಕಾರ್ಮಿಕರ ಕಲ್ಯಾಣ, ಆರೋಗ್ಯ ಮತ್ತು ಶಿಕ್ಷಣವನ್ನು ಪಡೆಯಲು ಕಾನೂನು ತರಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು.

Leave A Reply