ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. 12 ಅಂಗನವಾಡಿ ಕಾರ್ಯಕರ್ತೆ, 72 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗಳಾಗಿ ನೇಮಕ ಮಾಡುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಜುಲೈ 29 ರೊಳಗೆ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ: ಅಂಗನವಾಡಿ ಕಾರ್ಯಕರ್ತೆ : 12
ಅಂಗನವಾಡಿ ಸಹಾಯಕಿ: 72
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 29-06-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29-07-2022
ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಎಸ್ಎಲ್‌ಸಿ/ 10ನೇ ತರಗತಿ ಪಾಸ್,
ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ,
ಗರಿಷ್ಠ 9ನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ.
You must log in to post a comment.