FLASH NEWS | ಮಳೆಯ ನಡುವೆಯೂ ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಅಗ್ನಿ ದಹನ !

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನಲ್ಲಿ ಗ್ಯಾರೇಜ್ ಹಾಗೂ ಹಾಸಿಗೆ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.

 

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಎರಡು ಅಗ್ನಿ ಶಾಮಕ ವಾಹನ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಸದ್ಯದ ಮಾಹಿತಿ ಪ್ರಕಾರ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ವೈಟ್ ಫೀಲ್ಡ್​ನಲ್ಲಿನ ಗ್ಯಾರೇಜ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಹಾಸಿಗೆ ಅಂಗಡಿಗೆ ಸಹ ತಗುಲಿದೆ. ಅಗ್ನಿ ಅವಘಡದಿಂದಾಗಿ ಗ್ಯಾರೇಜ್​ನಲ್ಲಿದ್ದ 20ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಹಾಗೂ ಲಕ್ಷಾಂತರ ರೂ. ಮೌಲ್ಯದ ಹಾಸಿಗೆಗಳು ಸುಟ್ಟು ಕರಕಲಾಗಿವೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Leave A Reply

Your email address will not be published.