ಬೆಳ್ತಂಗಡಿ:ತಾಲೂಕಿನಲ್ಲಿ ನಿರಂತರ ಮಳೆ-ಇಂದು ಜು.04 ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ನಿರಂತರ ಬೀಳುತ್ತಿರುವ ಕುಂಭ ದ್ರೋಣ ಮಳೆಯ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗಿದೆ.

 

ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯ ಪ್ರಮಾಣ ಕೊಂಚ ಇಳಿಕೆ ಕಂಡಿದ್ದು, ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಮಳೆ ಹೆಚ್ಚಿರುವ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿತ್ತು.

ಅಂತೆಯೇ, ನಿನ್ನೆಯಿಂದ ಬೆಳ್ತಂಗಡಿ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಮುಂಜಾಗ್ರತ ಕ್ರಮವಾಗಿ ಜುಲೈ 04ರಂದು ಇಂದು ರಜೇಘೋಸಲಾಗಿದೆ. ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಒಂದು ದಿನ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

Leave A Reply

Your email address will not be published.