ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಬೀಳ್ಕೊಡುಗೆ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡಿರುವ ಸಿಬ್ಬಂದಿಗಳಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಬೀಳ್ಕೊಡುಗೆ ಸಮಾರಂಭ ನಡೆದಿದೆ.

 

ಇತ್ತೀಚಿನ ದಿನಗಳಲ್ಲಿ ಧರ್ಮಸ್ಥಳ ಠಾಣೆಯಲ್ಲಿ ಆರೇಳು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಹಾಗೂ ಕಾನ್ಸ್ಟೇಬಲ್ ಗಳು ಸೇರಿ ಒಟ್ಟು ಹತ್ತು ಮಂದಿ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡಿದ್ದಾರೆ. ಇದೀಗ ಹಲವು ದಿನಗಳಿಂದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಧರ್ಮಸ್ಥಳ ಠಾಣೆಯಿಂದ ಬೀಳ್ಕೊಡುಗೆ ಸಮಾರಂಭವನ್ನು ಬಹಳ ವಿಜೃಂಭಣೆಯಿಂದ ಕನ್ಯಾಡಿಯಲ್ಲಿ ಆಚರಿಸಲಾಗಿದೆ.

ಈ ಬೀಳ್ಕೊಡುಗೆ ಸಮಾರಂಭದಲ್ಲಿ ಅನೇಕ ಗಣ್ಯರು ಉಪಸ್ಥಿತಿ ಇದ್ದು, ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್, ಬೆಳ್ತಂಗಡಿ ಎಸ್ಐ, ಧರ್ಮಸ್ಥಳ ಎಸ್ಐ ಹಾಗೂ ಅನೇಕರು ಪಾಲ್ಗೊಂಡಿದ್ದರು.

Leave A Reply

Your email address will not be published.