ಪಡಿತರ ಚೀಟಿದಾರರೇ ಗಮನಿಸಿ | ಹೊಸ BPL, APL ಪಡಿತರ ಚೀಟಿ’ಗೆ ಅರ್ಜಿ ಸಲ್ಲಿಸಲು ಈ ವಿಧಾನ ಅನುಸರಿಸಿ.!

ಹೊಸ ಪಡಿತರ ಚೀಟಿಗಾಗಿ ರಾಜ್ಯದ ನಾಗರಿಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 2022 ರಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು.

ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ಹೇಗೆ ಅರ್ಜಿ ಹೇಗೆ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ  ಮಾಹಿತಿ ಇಲ್ಲಿದೆ


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ :
ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು
ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು
ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

ವೋಟರ್ ಐಡಿ, ಆಧಾರ್ ಕಾರ್ಡ್ , ವಯಸ್ಸಿನ ಪ್ರಮಾಣ ಪತ್ರ, ಡ್ರೈವಿಂಗ್ ಲೈಸೆನ್ಸ್, ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ, ಮೊಬೈಲ್ ಸಂಖ್ಯೆ ಸ್ವಯಂ ಘೋಷಿತ ಪ್ರಮಾಣ ಪತ್ರ

ಈ ಮೇಲ್ಕಂಡ ದಾಖಲೆಗಳ ಮೂಲಕ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸೋದು ಹೇಗೆ ಎಂದು ಇಲ್ಲಿ ತಿಳಿಸಲಾಗಿದೆ

ಹೊಸ ಪಡಿತರ ಚೀಟಿಗಾಗಿ ಈ ಕೆಳಗಿನ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ
kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ .
ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
ನಂತರ ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ನಂತರ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ. ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ. ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತಹ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಆದ್ರೇ ಪಡಿತರ ಚೀಟಿ ಬಂದ ನಂತ್ರ, ಸಂಬಂಧ ಪಟ್ಟಂತ ಅಧಿಕಾರಿಯಿಂದ ಪಡೆಯಲು ರೂ.100 ಪಾವತಿಸಬೇಕಿದೆ

error: Content is protected !!
Scroll to Top
%d bloggers like this: