ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ
ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ರೇಡ್ ಮಾಡಲಾಗಿದೆ.
ಸರ್ಚ್ ವಾರಂಟ್ ಪಡೆದು ಎಸಿಬಿ ತಂಡ ದಾಳಿ ಮಾಡಿದೆ. 50 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಸಿದ್ದು, ಇಡಿ ಹಾಗು ಐಟಿ ಇಲಾಖೆಯಿಂದ ಮಾಹಿತಿ ಪಡೆದಿದ್ದ ಎಸಿಬಿ, SP ಯತೀಶ್ ಚಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಆದಾಯ ಮೀರಿ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲ್ವೇ ಸ್ಟೇಷನ್ ಸಮೀಪ ಇರುವ ಜಮೀರ್ ಅಹಮದ್ ನಿವಾಸ, ಸದಾಶಿವನಗರದ ಅತಿಥಿಗೃಹ ಹಾಗೂ ಕಲಾಸಿಪಾಳ್ಯದ ಟ್ರಾವೆಲ್ಸ್ ಕಚೇರಿ, ಬನಶಂಕರಿಯಲ್ಲಿರುವ ಕಚೇರಿ ಮತ್ತು ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಲಾಗಿದೆ.
ಮನೆ ಹಾಗೂ ಕಚೇರಿ ಸೇರಿ ಐದು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಈ ಮೂಲಕ ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಎಸಿಬಿ ಶಾಕ್ ನೀಡಿದೆ.