ಕಡಬಕ್ಕೆ ಜಿಲ್ಲಾಧಿಕಾರಿ ಭೇಟಿ, ಇಕ್ಕಟ್ಟಿನ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಪರದಾಟ

ಕಡಬಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಭೇಟಿ ನೀಡಿದ್ದಾರೆ.ಆದರೆ ಇಕ್ಕಟ್ಟಿನ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಪರದಾಟ ನಡೆಸುವಂತಾಗಿದೆ.

 

ಒಂದೆಡೆ ಮಳೆ, ಇನ್ನೊಂದೆಡೆ ಕಛೇರಿಯ ಎದುರು ಪುರುಷರು, ಮಹಿಳೆಯರು ಅರ್ಜಿ ಹಿಡಿದುಕೊಂಡು ನಿಂತು ಬಿಟ್ಟಿದ್ದಾರೆ.

ಜಿಲ್ಲಾಧಿಕಾರಿ ತಹಸೀಲ್ದಾರ್ ಅವರ ಕಛೇರಿಯ ಒಳಗಡೆ ಜನರ ಸಮಸ್ಯೆ ಆಲಿಸಿ ಪರಿಹಾರ ನೀಡುತ್ತಿದ್ದಾರೆ.ಉತ್ತಮ ಕಾರ್ಯಕ್ರಮವಾದರೂ ಇದನ್ನು ಒಂದು
ಸಭಾಭವನದಲ್ಲಿ ಮಾಡಿದ್ದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತಿತ್ತು.

ತಾಲೂಕು ಆಡಳಿತ ಎಚ್ಚೆತ್ತೊಳ್ಳಲಿ ಎಂದು ಸಾರ್ವಜನಿಕರ ಅಭಿಪ್ರಾಯ.

Leave A Reply

Your email address will not be published.