SSLC ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ!

2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶವನ್ನು ಹೊರಡಿಸಿದೆ.

 

ಕೋವಿಡ್ ಹಿನ್ನೆಲೆಯಲ್ಲಿ 2020-21 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ದಿನಾಂಕ 01-01-2021 ರಿಂದ ಪ್ರಾರಂಭವಾಗಿದ್ದರೂ ಸಹ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದನ್ನು ಕಡ್ಡಾಯಗೊಳಿಸಿರಲಿಲ್ಲ. ಈ ಸಂಬಂಧ ಸರ್ಕಾರದ ಆದೇಶ ಸಂಖ್ಯೆ ಇಪಿ 24 ಎಸ್ಎಲ್ ಬಿ 2021 ದಿನಾಂಕ 01-02-2021 ರಿಂದ ರಾಜ್ಯದಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿತ್ತು. ಈ ವರ್ಷ ಎಸ್ ಎಸ್ಎಲ್ ಸಿ ಪರೀಕ್ಷೆಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಲಾಗಿದೆ.

Leave A Reply

Your email address will not be published.