ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಜು. 7 ರಂದು ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ, ಸ್ನಾತಕೋತ್ತರ, ಐಟಿಐ, ಎಂಜಿನಿಯರಿಂಗ್ ಕಾಲೇಜು ಸಹಿತ ನಾಳೆ (ಜು.7) ರಂದು ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ದಿನಾಂಕ: 07.07.2022 ರಂದು ರೆಡ್ – ಅಲರ್ಟ್ ಘೋಷಣೆಯಾಗಿರುವುದರಿಂದ, ಅತಿಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ತನ್ನ ಆದೇಶ ಪತ್ರದಲ್ಲಿ ತಿಳಿಸಿದೆ.

1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ, ಪದವಿ, ಸ್ನಾತಕೊತ್ತರ ಪದವಿ,ಡಿಪ್ಲೋಮ, ಇಂಜಿನಿಯರಿಂಗ್, ಐ ಟಿ ಐ, ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 07.07.2022 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತ ಪಾಲಕರು ಜಾಗ್ರತೆ ವಹಿಸುವುದು,

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.

5. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ
ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು,

6. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

7. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

Leave A Reply

Your email address will not be published.